ಸಮಾಜದಲ್ಲಿನ ಹಿರಿಯರನ್ನು ಪ್ರತಿಯೊಬ್ಬರು ಗೌರವಿಸಬೇಕು : ರೆ.ಫಾ. ಜೇಮ್ಸ್ ಡೊಮಿನಿಕ್

ವಿರಾಜಪೇಟೆ : ಹಿರಿಯರನ್ನು ಪ್ರತಿಯೊಬ್ಬರು ಕೂಡ ಗೌರವಿಸಬೇಕು ಎಂದು ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್‌ನ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್ ಅಭಿಪ್ರಾಯಪಟ್ಟರು. ಸಂತ ಅನ್ನಮ್ಮ ದ್ವಿ-ಶತಮಾನೋತ್ಸವ ಸಭಾಂಗಣದಲ್ಲಿ ಮದರ್ ಥೆರೇಸಾ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹಿರಿಯರನ್ನು ಗೌರವಿಸುವುದು ಗಮನಾರ್ಹ ವಿಚಾರವಾಗಿದೆ. ಈ ಧರ್ಮಸಭೆಯನ್ನು ಹಿರಿಯರು ಕಟ್ಟಿ ಬೆಳೆಸಿರುತ್ತಾರೆ. ಧರ್ಮ ಕೇಂದ್ರದಲ್ಲಿ […]