ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ – ಸರ್ಕಾರದ ವಿರುದ್ಧ ಸಂಸದ ಯದುವೀರ್‌ ಆಕ್ರೋಶ

ಮೈಸೂರು : ಇತ್ತೀಚಿನ ದಿನದಲ್ಲಿ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಹಬ್ಬದ ವಾತಾವರಣ ಈಗಲೂ ಇದೆ. ಆದರೆ ಇಲ್ಲಿ ನಡೆದ ಘಟನೆಗಳು ಕಾನೂನು ಸುವ್ಯವಸ್ಥೆ ಹೇಗಿದೆ ಅನ್ನೋದನ್ನ ತೋರಿಸುತ್ತಿದೆ. ಹಿಂದೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಯಿತು. 340 ಕೋಟಿ ರೂಪಾಯಿಯ ಡ್ರಗ್ಸ್ ಪತ್ತೆಯಾಯಿತು. ಇದನ್ನ ಮಹಾರಾಷ್ಟ್ರದ ಪೊಲೀಸರು ಪತ್ತೆ ಮಾಡಬೇಕಾಯಿತು. ಇದೀಗ ಅರಮನೆ ಬಳಿಯಲ್ಲೇ ಕೊಲೆ […]

ಮೈಸೂರು ದಸರಾ ಉದ್ಘಾಟನೆ ವಿವಾದ : ಬಾನು ಮುಷ್ತಾಕ್‌ ಮುಸ್ಲಿಂ ಅನ್ನುವ ಕಾರಣಕ್ಕೆ ವಿರೋಧಿಸುತ್ತಿಲ್ಲ – ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಬಾನು ಮುಷ್ತಾಕ್‌ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ದಸರಾ ಉದ್ಘಾಟನೆಗೆ ವಿರೋಧ ಪಡಿಸುತ್ತಿಲ್ಲ. ಹಿಂದುಗಳ ಅರಿಶಿಣ ಕುಂಕುಮದ ಕುರಿತಾಗಿನ ಅವರ ನಿಲುವಿನ ಬಗ್ಗೆ ನಮ್ಮ ಆಕ್ಷೇಪ ಇರುವುದು ಅಂತ ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಾನು ಮುಷ್ತಾಕ್‌ ಬುಕರ್‌ ಪ್ರಶಸ್ತಿ ಗೆದ್ದಾಗ ನಾವೆಲ್ಲ ಅವರನ್ನು ಅಭಿನಂದಿಸಿದ್ದೇವೆ. ಆದರೆ ದಸರಾ ಉದ್ಘಾಟನೆಗೆ ಅವರನ್ನು ಆಯ್ಕೆ ಮಾಡಿದ ಸಂದರ್ಭದಲ್ಲಿ ನಮ್ಮ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದು, ವಿರೋಧವನ್ನೂ ವ್ಯಕ್ತಪಡಿಸಿದ್ದೇವೆ. ಅವರಿಗೆ ಹಿಂದುಗಳ ಆಚರಣೆ, […]

ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ದೊಡ್ಡ ಸಾಧನೆ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ “ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ಸರ್ಕಾರ ಈಗಾಗಲೇ 10 ಎಕರೆ […]

ಪಾಕಿಸ್ತಾನದ ಮೇಲಿನ ಸಿಟ್ಟಿಗೆ ಮೈಸೂರು ಪಾಕ್‌ ಹೆಸರು ಚೇಂಜ್: ಹೊಸ ಹೆಸರೇನು?

Mysore Pak

ಪಹಲ್ಗಾಂನಲ್ಲಿ ಭಯೋತ್ಪಾದಕ ದಾಳಿ ನಡೆದು ಒಂದು ತಿಂಗಳಾದರೂ ಪಾಕಿಸ್ತಾನದ ವಿರುದ್ಧ ಸಿಟ್ಟು ಕಡಿಮೆಯಾಗುತ್ತಿಲ್ಲ. ರಾಜಸ್ಥಾನದ ಜೈಪುರದಲ್ಲಿ ಪಾಕ್ ಹೆಸರಿರುವ ತಿನಿಸುಗಳ ಹೆಸರು ಬದಲಾಯಿಸಲಾಗಿದೆ. ಅದರಲ್ಲೂ ಹೀಗಾಗಿ, ಇಲ್ಲಿ ಮೈಸೂರು ಪಾಕ್ (Mysore Pak) ಮೈಸೂರು ಶ್ರೀಯಾಗಿ (Mysore Shree) ಬದಲಾಗಿದೆ. ಸಿಹಿ ತಿನಿಸುಗಳಲ್ಲಿನ ‘ಪಾಕ್’ ಪದಕ್ಕೂ ಪಾಕಿಸ್ತಾನಕ್ಕೂ ಸಂಬಂಧವಿಲ್ಲದಿದ್ದರೂ, ವ್ಯಾಪಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ನಾವು ಮೋತಿ ಪಾಕ್ ಅನ್ನು ಮೋತಿ ಶ್ರೀ ಎಂದು ಗೋಂದ್ ಪಾಕ್ ಅನ್ನು ಗೋಂದ್ ಶ್ರೀ ಎಂದು, ಮೈಸೂರು ಪಾಕ್’ ಅನ್ನು […]