ಎನ್ಎಸ್ಎಸ್‌ಗೆ ಸಾಮಾನ್ಯ ವ್ಯಕ್ತಿತ್ವವನ್ನು ವಿಶೇಷ ವ್ಯಕ್ತಿತ್ವವನ್ನಾಗಿ ಮಾರ್ಪಡಿಸುವ ಶಕ್ತಿ ಇದೆ – ಡಾ.ಕೆ.ಸಿ. ದಯಾನಂದ

ವೀರಾಜಪೇಟೆ(Virajpet) : ವ್ಯಕ್ತಿತ್ವ ವಿಕಸನದೊಂದಿಗೆ ಸಮಾಜದಲ್ಲಿ ವಿಶೇಷವಾದ ಸ್ಥಾನಮಾನ ಪಡೆಯುವುದರೊಂದಿಗೆ ಸಹಕಾರ ಮನೋಭಾವನೆ ಬೆಳೆಸಲು ಎನ್.ಎಸ್.ಎಸ್(NSS) ಸಹಕಾರಿ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಕೊಡಗು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ನೋಡಲ್ ಅಧಿಕಾರಿ ಡಾ.ಕೆ.ಸಿ. ದಯಾನಂದ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಮಂಗಳವಾರ ನಡೆದ ಎನ್.ಎಸ್.ಎಸ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಮನೋಭಾವವನ್ನು ಬೆಳೆಸುವುದರೊಂದಿಗೆ ಸಮಸ್ಯೆ ಬಗೆಹರಿಸಲು ಹೇಗೆ ಒಗ್ಗೂಡಬೇಕು […]