ಆಧುನಿಕತೆಯ ಬರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತಿರುವುದು ವಿಷಾದನೀಯ: ವಿನೋದ್ ಮೂಡಗದ್ದೆ

ವಿರಾಜಪೇಟೆ: ಪೂರ್ವಜರು ಪ್ರಕೃತಿಯೊಂದಿಗೆ ಒಡನಾಟದೊಂದಿಗೆ ಬಾಳಿ ಬದುಕು ಕಂಡಿದ್ದರು. ಸುಖಿ ಜೀವನ ನಡೆಸುತಿದ್ದರು. ಇದೀಗ ಆಧುನಿಕತೆ ಎಲ್ಲಡೆ ಪಸರಿಸಿ ಪೂರ್ವಜರು ನಡೆಸಿಕೊಂಡು ಬಂದ ಜೀವನ ಪದ್ದತಿಯು ಕಣ್ಮರೆಯಾಗುತಿರುವುದನ್ನು ನಾವು ಮನಕಾಣುತಿದ್ದೇವೆ ಎಂದು ಮಡಿಕೇರಿ ಆಕಾಶವಾಣಿಯ ಉದ್ಘೋಷಕರಾದ ವಿನೋದ್ ಮೂಡಗದ್ದೆ ಅವರು ವಿಷಾದ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ, ಆಶ್ರಯದಲ್ಲಿ ಕಲ್ತೋಡು ನಾಂಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ೦೬ ದಿನಕಾಲ ವಾರ್ಷಿಕ ವಿಶೇಷ […]
ಸೆಂಟ್ ಆನ್ಸ್ ಪದವಿ ಕಾಲೇಜಿನ NSS ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ವಿರಾಜಪೇಟೆ: ಸ್ವಚ್ಛತೆಯ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು ಬಿಟ್ಟಂಗಾಲ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಫೀಕ್ ಎ ಎ ರವರು ಅಭಿಪ್ರಾಯಪಟ್ಟರು. ಅವರು ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ನಡೆಯುತ್ತಿದ್ದು ಅದರ ಪ್ರಯುಕ್ತ ಜರುಗಿದ ಗ್ರಾಮ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಸ್ವಯಂ ಸೇವಾ ವಿದ್ಯಾರ್ಥಿಗಳನ್ನು […]
ಸೆಂಟ್ ಆನ್ಸ್ ಪದವಿ ಕಾಲೇಜಿನ NSS ಘಟಕದ ವಾರ್ಷಿಕ ವಿಶೇಷ ಶಿಬಿರ ಮಾರ್ಚ್ 4 ರಿಂದ ಆರಂಭ

ವಿರಾಜಪೇಟೆ : ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಮಾರ್ಚ್ 4 ರಿಂದ ಮಾರ್ಚ್ 10 ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ಜರುಗಲಿದೆ. ಮಾರ್ಚ್ 4 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು ಉದ್ಘಾಟನೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ರವರು ನೆರವೇರಿಸಲಿದ್ದಾರೆ.ಬಿಟ್ಟಂಗಾಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಮೂಕಚಂಡ […]
ಉತ್ತಮ ಜೀವನ ರೂಪುಗೊಳ್ಳಲು ಎನ್‌ಎಸ್‌ಎಸ್ ಸಹಕಾರಿ – ಗಣ್ಯರ ಅಭಿಪ್ರಾಯ

ವೀರಾಜಪೇಟೆ : ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನ ರೂಪಿಸುವುದರೊಂದಿಗೆ ಅವರಲ್ಲಿರುವ ವಿಶೇಷ ಗುಣ, ಹವ್ಯಾಸಗಳನ್ನು ತೋರ್ಪಡಿಸಲು ಎನ್ ಎಸ್ ಎಸ್ ಶಿಬಿರಗಳು ಅತ್ಯುತ್ತಮ ವೇದಿಕೆಯೆಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು ಕಡಂಗದಲ್ಲಿ ಗುರುವಾರ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಹೆಚ್ಚಿನ ವಿಚಾರಗಳನ್ನು ಕಲಿಯಲು ಹಾಗೂ ಕಲಿತ ವಿಚಾರಗಳನ್ನು ಜೀವನದಲ್ಲಿ […]
ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಸ್ವಚ್ಛತೆ ಹಾಗೂ ನೈರ್ಮಲ್ಯದ ಪಾಠಗಳನ್ನು ಯಾರಿಂದಲೂ ಬೋಧಿಸಿ ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ ಸ್ವಚ್ಛತೆ ಎಂಬುದು ಪ್ರತಿಯೊಬ್ಬರನ್ನು ಸ್ವ ಇಚ್ಛೆಯಿಂದ ಬಂದಾಗ ಸ್ವಚ್ಛ ಪರಿಸರ ನಿರ್ಮಿಸಲು ಸಾಧ್ಯ ಎಂದು ನರಿಯಂಡಡ ಗ್ರಾಮ ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಅಭಿಪ್ರಾಯಪಟ್ಟರು . ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು ಕಡಂಗದಲ್ಲಿ ನಡೆಯುತ್ತಿರುವ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನ ನಡೆದ ಗ್ರಾಮ ಸ್ವಚ್ಛತಾ […]
ಮೊಬೈಲ್ ಗೀಳನ್ನು ಬದಿಗೊತ್ತಿ ಸಾಮಾಜಿಕ ಮೌಲ್ಯಗಳಿಗೆ ಬೆಲೆ ತೆತ್ತು ಸಮಾಜ ಸೇವೆಗೆ ಮುಂದಾಗಿ: ಕೌಶಿ ಕಾವೇರಮ್ಮ

ವಿರಾಜಪೇಟೆ: ಕಾಲೇಜು ಶಿಕ್ಷಣ ಪಠ್ಯೇತರ ಚಟುವಟಿಕೆಗಳನ್ನು ತಿಳಿಸಿಕೊಡುತ್ತದೆ. ಪಾಠ ಪ್ರವಚನದೊಂದಿಗೆ ಸಾಮಾಜಿಕ ಮೌಲ್ಯಗಳಿಗೆ ಗೌರವಸೂಚಿಸಿ ಉತ್ತಮ ಸಮಾಜ ರೂಪಿಸುವಲ್ಲಿ ವಿದ್ಯಾರ್ಥಿಗಳು ಮುಂದಾಗುವಂತೆ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಅವರು ಹೇಳಿದರು. ಕಾಲೇಜು ಶಿಕ್ಷಣ ಇಲಾಖೆ, ಕೊಡಗು ವಿಶ್ವವಿದ್ಯಾನಿಲಯ, ಕಾವೇರಿ ಪದವಿ ಕಾಲೇಜು ವಿರಾಜಪೇಟೆ ಆಶ್ರಯದಲ್ಲಿ ಕಡಂಗ ಅರಪಟ್ಟು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಹೂವಿನ ಗಿಡಕ್ಕೆ ನೀರು […]
NSS ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮ

ವಿರಾಜಪೇಟೆ : ರಾಜ್ಯ ಸರ್ಕಾರವು ರಾಜ್ಯಾದ್ಯಂತ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಯನ್ನು ಮಾಡುತ್ತಿದ್ದು, ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ಸ್ವಯಂ ಸೇವಕರು ಗಣತಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿದರು. ವಿರಾಜಪೇಟೆಯ ಪುರಸಭಾ ವ್ಯಾಪ್ತಿಯ ಚರ್ಚ್ ಸ್ಟ್ರೀಟ್, ಜನರಲ್ ತಿಮ್ಮಯ್ಯ ಬಡಾವಣೆ, ಹಾಗೂ ಅಪ್ಪಯ್ಯ ಸ್ವಾಮಿ ರಸ್ತೆಯ ಮನೆಗಳಿಗೆ ತೆರಳಿ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಗಣತಿಯ ಕುರಿತು ಜಾಗೃತಿಯನ್ನು ಮೂಡಿಸಿದರು. ಎನ್ಎಸ್ಎಸ್ ಸ್ವಯಂಸೇವಕರು ವಿವಿಧ ಗುಂಪುಗಳಾಗಿ ವಿಂಗಡಿಸಿ ಪ್ರತ್ಯೇಕವಾಗಿ ಮನೆಮನೆಗಳಿಗೆ ತೆರಳಿ ಜಾಗೃತಿಯನ್ನು […]
ಎನ್ಎಸ್ಎಸ್‌ಗೆ ಸಾಮಾನ್ಯ ವ್ಯಕ್ತಿತ್ವವನ್ನು ವಿಶೇಷ ವ್ಯಕ್ತಿತ್ವವನ್ನಾಗಿ ಮಾರ್ಪಡಿಸುವ ಶಕ್ತಿ ಇದೆ – ಡಾ.ಕೆ.ಸಿ. ದಯಾನಂದ

ವೀರಾಜಪೇಟೆ(Virajpet) : ವ್ಯಕ್ತಿತ್ವ ವಿಕಸನದೊಂದಿಗೆ ಸಮಾಜದಲ್ಲಿ ವಿಶೇಷವಾದ ಸ್ಥಾನಮಾನ ಪಡೆಯುವುದರೊಂದಿಗೆ ಸಹಕಾರ ಮನೋಭಾವನೆ ಬೆಳೆಸಲು ಎನ್.ಎಸ್.ಎಸ್(NSS) ಸಹಕಾರಿ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಕೊಡಗು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ನೋಡಲ್ ಅಧಿಕಾರಿ ಡಾ.ಕೆ.ಸಿ. ದಯಾನಂದ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಮಂಗಳವಾರ ನಡೆದ ಎನ್.ಎಸ್.ಎಸ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಮನೋಭಾವವನ್ನು ಬೆಳೆಸುವುದರೊಂದಿಗೆ ಸಮಸ್ಯೆ ಬಗೆಹರಿಸಲು ಹೇಗೆ ಒಗ್ಗೂಡಬೇಕು […]
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು – NSS ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಪ್ರತಿಮೆಗೆ ಪುಷ್ಪ ನಮನ ಮಾಡಿ, ಯುವ ಸ್ಪಂದನವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನ ತಾವು ತೋಡಗಿಸಿಕೊಳ್ಳಲು ಹಾಗೂ ಗುರುತಿಸಿಕೊಳ್ಳಲು ಒಂದು ಉತ್ತಮ ಅವಕಾಶ. ಇಲ್ಲಿ ಸೇವಾ ಮನೋಭಾವ ಮಾತ್ರವಲ್ಲ ಅದರ […]
ವಿರಾಜಪೇಟೆಯಲ್ಲಿ NSS ವಿದ್ಯಾರ್ಥಿಗಳಿಂದ ಪರಿಸರ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ವಿರಾಜಪೇಟೆ: ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿ (ರಿ ), ಆರ್ಜಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆರ್ಜಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಜಾಥಾ ಅಭಿಯಾನ ಕಾರ್ಯಕ್ರಮ ನಡೆಯಿತು. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜು ಹಾಗೂ ಕಾವೇರಿ ಪದವಿ ಕಾಲೇಜಿನ ಎನ್. ಎಸ್. ಎಸ್ (NSS) ಘಟಕದ ವಿದ್ಯಾರ್ಥಿಗಳು ಸ್ವಚ್ಛತಾ ಜಾಥಾದಲ್ಲಿ ಭಾಗವಹಿಸಿದ್ದರು. ಈ ಅಭಿಯಾನವನ್ನು ಆರ್ಜಿ ಗ್ರಾಮ ಪಂಚಾಯತ್ ನಲ್ಲಿ ಉದ್ಘಾಟಿಸಿ ಮಾತನಾಡಿದ ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಮಾಚಯ್ಯ ರವರು […]