ಪೊನ್ನಂಪೇಟೆ: ಮನೆ ಬಾಗಿಲಲ್ಲಿ ಚಿರತೆ ಪ್ರತ್ಯಕ್ಷ…!

ಪೊನ್ನಂಪೇಟೆ (Ponnampet) ತಾಲೂಕಿನ ಕೋತೂರು ಗ್ರಾಮದ ಅಜ್ಜಮಾಡ ಪವನ್ ಪೊನ್ನಪ್ಪ ಅವರ ಮನೆಯ ಅಂಗಳದಲ್ಲಿ ಭಾನುವಾರ ರಾತ್ರಿ ದೃಶ್ಯ ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು,ಅರಣ್ಯಾಧಿಕಾರಿಗಳು ಕಾರ್ಯಚರಣೆ ನಡೆಸುವಂತೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಪೊನ್ನಪೇಟೆ ಆರ್. ಎಫ್. ಓ ಶಂಕರ್, ಹಾಗೂ ಸಿಬ್ಬಂದಿ ಗಳಿಂದ ಭೇಟಿ.
ಒಡಿಶಾ ಮೂಲದ ವ್ಯಕ್ತಿಯಿಂದ ಗಾಂಜಾ ಮಾರಾಟ ಯತ್ನ: ಪೊಲೀಸರ ವಶಕ್ಕೆ

ಒಡಿಶಾ ಮೂಲದ ವ್ಯಕ್ತಿಯೋರ್ವ ತನ್ನೂರಿನಿಂದ ಗಾಂಜಾವನ್ನು ತಂದು ಪೊನ್ನಂಪೇಟೆ (Ponnampet) ತಾಲೂಕು ಕಾನೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊನ್ನಂಪೇಟೆ ಪೊಲೀಸರು ಹೆಣೆದ ಬಲೆಗೆ ಬಿದ್ದಿದ್ದಾನೆ. ಕಳೆದ ಹಲವು ವರ್ಷಗಳಿಂದ ಗುತ್ತಿಗೆದಾರರೊಬ್ಬರ ಬಳಿ ರಿಂಗ್ ಕೆಲಸ ನಿರ್ವಹಿಸುತ್ತಿದ್ದ, ಮೂಲತಃ ಒಡಿಶಾ ರಾಜ್ಯದ ಸಿರಿಂಗಿಂ ಗ್ರಾಮದ ಸಂಜಯ್ ನಾಯಕ್ ಎಂಬಾತ ಬಂಧಿತ ಆರೋಪಿಯಾಗಿದ್ದು ಈತನಿಂದ 3 ಕೆ.ಜಿ. 250 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ. ಈತ ಪ್ರತಿ ವರ್ಷ 3 – 4 ಬಾರಿ ತನ್ನ ಊರಿಗೆ ತೆರಳಿ ಅಲ್ಲಿಂದ […]
Power Cut… ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್ 13 ದೇವನೂರು ಫೀಡರ್‍ನಲ್ಲಿ ಏಪ್ರಿಲ್, 24 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ದೇವನೂರು, ಮಲ್ಲೂರು, ಕಿಸ್ತೂರು, ರಾಜಪುರ, ಬೆಟ್ಟತ್ತೂರು, ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬೀಳೂರು, ಸುಳುಗೋಡು, ಬಾಳೆಲೆ, ಜಾಗಲೆ, ನಿಟ್ಟೂರು, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.