ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ನೀಡುವ ಆದೇಶ –ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಂದಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ ಆದೇಶವನ್ನು […]

RSS ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ? – ಬೆದರಿಕೆಗೆ ನಾನೂ ಹೆದರಲ್ಲ, ಖರ್ಗೆಯವರೂ ಹೆದರಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ತಮಿಳುನಾಡಿನಲ್ಲಿ ಆರ್.ಎಸ್.ಎಸ್. […]