ಅಪ್ಪು ಕಪ್ ಸೀಸನ್ 3 ಬ್ಯಾಡ್‌ಮಿಂಟನ್ ಪಂದ್ಯಾವಳಿಗೆ ಚಾಲನೆ

ಬೆಂಗಳೂರು: ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಆಯೋಜಿಸಲಾಗುವ ʼಅಪ್ಪುಕಪ್ ಸೀಸನ್ 3ʼರ ಬ್ಯಾಡ್‌ಮಿಂಟನ್ ಪಂದ್ಯಾವಳಿಗೆ ಇಂದು ನಗರದ ಕಿಂಗ್ಸ್ ಕ್ಲಬ್‌ನಲ್ಲಿ ಚಾಲನೆ ನೀಡಲಾಯಿತು. ತೆರೆ ಮೇಲೆ ಮನರಂಜಿಸುವ ತಾರೆಯರು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಕಾತುರದಿಂದ ಕಾಯುತ್ತಿದ್ದುದು ಕಣ್ಣಿಗೆ ಹಬ್ಬದಂತಿತ್ತು. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಗೆ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಲಾಯಿತು. ವೇದಿಕೆಯ ಮೇಲೆ ನಟ ಅನಿರುದ್ಧ್, ನಿರ್ದೇಶಕ ಇಂದ್ರಜಿತ್ ಲಂಕೇಶ್ ಸೇರಿದಂತೆ ವಿವಿಧ ತಂಡದ ನಾಯಕರು […]