ಕುರುಳಿ ಅಂಬಲಮಂದ್‌ನಲ್ಲಿ ಸಂಭ್ರಮದಿಂದ ಜರುಗಿದ ಪುತ್ತರಿ ಕೋಲಾಟ್

ಮಡಿಕೇರಿ : ಕಡಗದಾಳುವಿನ ಕುರುಳಿ ಅಂಬಲ ಮಂದ್‌ನಲ್ಲಿ ಪುತ್ತರಿ ಕೋಲಾಟ್ ಸಾಂಪ್ರದಾಯಿಕವಾಗಿ ಮಂಗಳವಾರ ನಡೆಯಿತು. ಡಿಸೆಂಬರ್ 03ರ ಸಂಜೆ ಈಡ್, ಡಿ.7 ಭಾನುವಾರ ಮುಂಜಾನೆ ಮಂದ್ ತೊರ್‌ಪ, ಡಿ 9ರ ಮಂಗಳವಾರ ಊರಿನವರು ಮಂದ್‌ನಲ್ಲಿ ಸೇರಿ ಮಧ್ಯಾಹ್ನ 12 ಗಂಟೆಗೆ ಊರ್ ತಕ್ಕರ‌ ಮನೆಗೆ ತೆರಳಿ ಫಲಹಾರ ಊಟೋಪಚಾರದ ನಂತರ ತಳಿಯಕ್ಕಿ ಬೊಳ್‌ಚ, ದುಡಿಕೊಟ್ಟ್ ಪಾಟ್, ಒಡ್ಡೋಲಗದೊಂದಿಗೆ ಊರ್ ತಕ್ಕರನ್ನು ಮಂದ್‌ಗೆ ಕರೆ ತಂದರು. ನಂತರ ಊರ್ ಕೋಲ್ ನಡೆಯಿತು. 3 ಗಂಟೆಗೆ ದೇಶ ತಕ್ಕರನ್ನು ಹಾಗು […]

ಕೊಡವ ಮುಸ್ಲಿಮರಿಂದ ಕಾಟ್ರಕೊಲ್ಲಿ ಪುತ್ತರಿ ಆಚರಣೆ

ಪೊನ್ನಂಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ಪುತ್ತರಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮವನ್ನು ಗುರುವಾರ ರಾತ್ರಿ ನೂರಾರು ಕೊಡವ ಮುಸ್ಲಿಂ ಸಮುದಾಯದವರು ದ. ಕೊಡಗಿನ ಕಾಟ್ರಕೊಲ್ಲಿಯಲ್ಲಿ ಅಲ್ಲಿನ ಆಲೀರ ಕುಟುಂಬಸ್ಥರ ಆತಿಥ್ಯದಲ್ಲಿ ಅದ್ದೂರಿಯಾಗಿ ಆಚರಿಸಿದರು. ಕಾಟ್ರಕೊಲ್ಲಿಯ ಆಲೀರ ಎಂ. ಸಾದಲಿ ಅವರ ಗದ್ದೆಯಲ್ಲಿ ಈ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮವನ್ನು ಕೆಎಂಎ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿಯವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಲೀರ ಕುಟುಂಬದ ಹಿರಿಯರಾದ […]