ರಾಜಾಸೀಟಿನಲ್ಲಿ ‘ಪುಟಾಣಿ ರೈಲು’ ಆರಂಭಕ್ಕೆ ಕ್ರಮ: ವೆಂಕಟ್ ರಾಜಾ

ಮಡಿಕೇರಿ: ರಾಜಾಸೀಟಿನಲ್ಲಿ ‘ಮಕ್ಕಳ ಪುಟಾಣಿ ರೈಲು’ ಆರಂಭ ಸಂಬಂಧ ದಕ್ಷಿಣ ವಲಯ ರೈಲ್ವೆ ವಿಭಾಗದ ಎಂಜಿನಿಯರ್‍ಗಳು ಪರಿಶೀಲಿಸಿದ್ದು, ಈ ಬಗ್ಗೆ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈಲು ಬೋಗಿ ಅಳವಡಿಸುವುದು ಸೇರಿದಂತೆ ದಕ್ಷಿಣ ರೈಲ್ವೆ ವಲಯದ ವಿಭಾಗದ ಎಂಜಿನಿಯರ್‍ಗಳು ಮಾಹಿತಿ ಪಡೆದಿದ್ದು, ಈ […]