ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಮೌನ ಮುರಿದ ರಾಹುಲ್ ದ್ರಾವಿಡ್: ಹೇಳಿದ್ದೇನು?

Rahul Dravid

ಕ್ರಿಕೆಟ್ ಲೋಕದ ಲೆಜೆಂಡರಿ ಆಟಗಾರ ರಾಹುಲ್ ದ್ರಾವಿಡ್ (Rahul Dravid) ಅವರು ಕೊನೆಗೂ ಮೌನ ಮುರಿದು ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ. ನಾನು ಕೂಡ ಬೆಂಗಳೂರಿನವನು ಬೆಂಗಳೂರಿನಲ್ಲಿರುವ ಜನರಿಗೆ ಕ್ರೀಡೆಯ ಬಗ್ಗೆ ಪ್ರೀತಿ ಇದೆ. ಜನರು ಕ್ರಿಕೆಟ್ ಮಾತ್ರವಲ್ಲ ಎಲ್ಲಾ ಕ್ರೀಡೆಯನ್ನು ಪ್ರೀತಿಸುತ್ತಾರೆ. ಫುಟ್ಬಾಲ್ ಇರಲ್ಲಿ ಕಬಡ್ಡಿ ಇರಲಿ ಎಲ್ಲಾ ತಂಡವನ್ನು ಜನರು ಫಾಲೋ ಮಾಡುತ್ತಾರೆ . ಈ ಬಾರಿ ಕಪ್ ಗೆದ್ದು 18 ವರ್ಷಗಳ ನಂತರ ಇದರ ಸೆಲೆಬ್ರೇಶನ್ಗಾಗಿ ತಂಡ ಬೆಂಗಳೂರಿಗೆ ಬಂದಿತ್ತು ಈ ವೇಳೆ […]

ಬೆಂಗಳೂರಿನಲ್ಲಿ ಕಾಲ್ತುಳಿತ: ಸ್ವಯಂಪ್ರೇರಿತ PIL ದಾಖಲಿಸಿಕೊಂಡ ಹೈಕೋರ್ಟ್

Karnataka HC

ಆರ್​ಸಿಬಿ (RCB) ವಿಜಯೋತ್ಸವ ಕಾರ್ಯಕ್ರಮದ ವೇಳೆ ಬೆಂಗಳೂರಿನ (Bengaluru) ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಈ ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ನೀಡಿ, ಆದೇಶ ಹೊರಡಸಿದೆ. ಈ ಪ್ರಕರಣದ ವಿಚಾರಣಾಧಿಕಾರಿಯಾಗಿ ಜಿಲ್ಲಾಧಿಕಾರಿ ಜಗದೀಶ್.ಜಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಕಾಲ್ತುಳಿತ ದುರಂತದಲ್ಲಿ 11 ಜನರ ಸಾವಿಗೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ […]

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ 11 ಸಾವು: ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

Chinnaswamy Stadium

ಬೆಂಗಳೂರು: ಐಪಿಎಲ್ 2025ರ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಬಳಿ ಭೀಕರ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಭೀಕರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), […]

RCB ಫ್ಯಾನ್ಸ್ ಗಮನಕ್ಕೆ: ಬೆಂಗಳೂರಿನಲ್ಲಿ ವಿಜಯಯಾತ್ರೆ… ಸಮಯ, ಎಲ್ಲಿಂದ-ಎಲ್ಲಿಗೆ?

Royal Challengers Bangalore

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆರ್‌ಸಿಬಿ ವಿಜಯಯಾತ್ರೆ ನಡೆಯಲಿದೆ. ಟ್ರೋಫಿ ಜೊತೆ ತಂಡದ ಆಟಗಾರರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ಅಹಮದಾಬಾದ್​ನಿಂದ ಆರ್​ಸಿಬಿ ತಂಡವು ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಆ ಬಳಿಕ ವಿಜಯಯಾತ್ರೆಗೆ ಸಿದ್ಧತೆಯನ್ನು ನಡೆಸಲಿದೆ. ಸಂಜೆ 3.30 ಕ್ಕೆ ಬೆಂಗಳೂರಿನ ವಿಧಾನಸೌಧದಿಂದ ಆರ್​​ಸಿಬಿ ತಂಡದ ವಿಜಯಯಾತ್ರೆ ಆರಂಭವಾಗಲಿದ್ದು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಈ […]