ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ವಿರಾಜಪೇಟೆ: ಸಮೀಪದ ಹೆಗ್ಗಳ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಸದಸ್ಯರಾದ ವಿನೋದ್ ಟಿ. ಆರ್. ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆಯ ಪೂರ್ವ ಪೀಠಿಕೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಅಧಿಕಾರಿಗಳಾದ ಬಿ. ಎನ್. ಶಾಂತಿಭೂಷಣ್ ಬೋರ್ಕರ್ ರವರು ದಿನದ ಮಹತ್ವದ ಕುರಿತು ಮಾತನಾಡುತ್ತಾ ಭಾರತವು ವಿಶ್ವದಲ್ಲಿಯೇ […]

ಮಡಿಕೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ

primary school teacher

ಸರ್ಕಾರಿ ಪ್ರಾಥಮಿಕ ಶಾಲೆಗಳ ಸೇವಾನಿರತ ಪದವೀದರ ಶಿಕ್ಷಕರಿಗೆ ಸಂಬಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಶಿಕ್ಷಕರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಪ್ರಾಥಮಿಕ ಶಾಲಾ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದಂತೆ ‘ವೃಂದ ಮತ್ತು ನೇಮಕಾತಿ’ ಆದೇಶದಿದ ತಿದ್ದುಪಡಿಯಿಂದ ಉಂಟಾಗಿರುವ ಸಮಸ್ಯೆಗಳನ್ನು […]

ಹೆಗ್ಗಳ ಸರ್ಕಾರಿ ಶಾಲೆಗೆ ಇನ್ವರ್ಟರ್ ಕೊಡುಗೆ

Heggala Government School

ಮಕ್ಕಳ ಹಾಜರಾತಿ ಇಲ್ಲದೆ ರಾಜ್ಯದ ಹಲವು ಸರ್ಕಾರಿ ಶಾಲೆಗಳುಮುಚ್ಚಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ಸರಕಾರಿ ಕನ್ನಡ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಕಲಿಕೆಗೆ ನೆರವಾಗಲು ಕೊಡುಗೈ ದಾನಿ, ಲಿಟಲ್ ಸ್ಕಾಲರ್ಸ್ ಅಕಾಡಮಿಯ ಮುಖ್ಯಸ್ಥರಾದ ಪೂಜಾ ರವೀಂದ್ರ ಅವರು ವಿರಾಜಪೇಟೆಯ ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಇನ್ವರ್ಟರ್ ಕೊಡುಗೆಯಾಗಿ ನೀಡಿದ್ದಾರೆ.

ಹೆಗ್ಗಳ ಸರ್ಕಾರಿ ಶಾಲೆಗೆ ಪ್ರಿಂಟರ್ ಕೊಡುಗೆ

ವಿರಾಜಪೇಟೆಯ ಹೆಗ್ಗಳ ಗ್ರಾಮದ ಸರ್ಕಾರಿ ‌ಕಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡ ವಿರಾಜಪೇಟೆ ಶಾಖೆ, ಇವರು ಶನಿವಾರ ದಂದು ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಿರುತ್ತಾರೆ. ಈ ವೇಳೆ ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್ ಅನೀಶ್ ಹಾಗೂ ಬ್ಯಾಂಕ್ ಸಿಬ್ಬಂದಿ ಗಣೇಶ್, ಶಾಲೆಯ ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಮೆಟ್ರಿಕ್‌ ಪೂರ್ವ ಬಾಲಕಿಯರ ನಿಲಯದಲ್ಲಿ ಹದಿಹರೆಯದ ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಾಗಾರ

ಮಡಿಕೇರಿ : ಪಾಲಿಬೆಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಪೋಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕಾನೂನು ಅರಿವು ಮತ್ತು ಹದಿಹರೆಯದ ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಯಿತು. ಪೊಲೀಸ್‌ ಉಪನಿರೀಕ್ಷಕ ಹೆಚ್.ಕೆ. ಮಂಜುನಾಥ್ ಅವರು ಪೋಕ್ಸೊ ಕಾಯ್ದೆ,112 ತುರ್ತು ಸಂಖ್ಯೆ, ಮಕ್ಕಳ ಸಹಾಯವಾಣಿ, ಮಾದಕ ಪದಾರ್ಥಗಳ ದುಷ್ಪರಿಣಾಮ, ಮೊಬೈಲ್ ಬಳಕೆ, ಸೈಬರ್ ಅಪರಾಧ, ಬಾಲ ಅಪರಾಧ, ಗುಡ್ ಟಚ್-ಬ್ಯಾಡ್ ಟಚ್ ಇವುಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಕ್ಕಳ ಆರೋಗ್ಯದ […]

ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನ

government school

ಇಂದು ಸ. ಕಿ. ಪ್ರಾ. ಹೆಗ್ಗಳ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನ ನಡೆಯಿತು. ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ನೆರವಾಗುತ್ತದೆ. ಶಾಲೆಗಳಲ್ಲಿ ನಡೆದ ಚುನಾವಣೆಗಳ ಅನ್ವಯ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಖಾತೆಗಳ ಹಂಚಿಕೆ ಮಾಡಿ ಆಯಾ ವರ್ಷದ ಶಾಲಾ ಜವಾಬ್ದಾರಿಯನ್ನು ವಹಿಸಲಾಗಿದೆ. ಪ್ರಧಾನ ಮಂತ್ರಿ, ಶಿಕ್ಷಣ ಮಂತ್ರಿ, ಸ್ವಚ್ಛತಾ ಮಂತ್ರಿ, ಗ್ರಂಥಾಲಯ ಪಾಲನೆ, ರಕ್ಷಣಾ ಮಂತ್ರಿ, ಆಹಾರ ಮಂತ್ರಿ ಹೀಗೆ ನಾನಾ ಖಾತೆಗಳನ್ನು ನೀಡಿ ಮಕ್ಕಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಚುನಾವಣಾ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು.

ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟ: ದ್ವಿತೀಯ ಸ್ಥಾನ ಮುಡಿಗೇರಿಸಿಕೊಂಡ ಕೊಡಗು ಸೈನಿಕ ಶಾಲೆ

football tournament

ಒಡಿಶಾದ (Odisha)ಭುವನೇಶ್ವರದಲ್ಲಿ ನಡೆದ ರಾಷ್ಟ್ರಮಟ್ಟದ ಅಂತರ ಸೈನಿಕ ಶಾಲೆಗಳ ಫುಟ್ಬಾಲ್ ಪಂದ್ಯಾವಳಿಯಲ್ಲಿ(National Inter-Sainik Schools Football Tournament)ಕೊಡಗು ಸೈನಿಕ ಶಾಲೆಯ ಜೂನಿಯರ್ ತಂಡವು ಪ್ರಥಮ ಬಾರಿಗೆ ದ್ವಿತೀಯ ಸ್ಥಾನವನ್ನು ಪಡೆದು ಪ್ರಶಸ್ತಿ ಹಾಗೂ ಟ್ರೋಫಿಯನ್ನು ಗಳಿಸಿದೆ. ಈ ಸಾಧನೆಯೊಂದಿಗೆ ಶಾಲೆಯು ಜಿಲ್ಲೆಗೆ ಕೀರ್ತಿ ತಂದಿದೆ. ಕ್ರೀಡಾಕೂಟದಿಂದ ಮರಳಿದ ವಿದ್ಯಾರ್ಥಿಗಳನ್ನು ಕೂಡಿಗೆ ಅಂಜಲಾ ವಿದ್ಯಾನಿಕೇತನ ಶಾಲೆಯಿಂದ ಅಲಂಕಾರಗೊಂಡ ವಾಹನದಲ್ಲಿ ಮೆರವಣಿಗೆಯ ಮೂಲಕ ಸೈನಿಕ ಶಾಲೆಗೆ ಕರೆತರಲಾಯಿತು. ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಮಲ್ಲಾರ್ಪಣೆ ಮೂಲಕ ಮೆರವಣಿಗೆಗೆ ಚಾಲನೆ […]

ಕೊಯನಾಡು ಶಾಲಾ ಕಟ್ಟಡ ನಿರ್ಮಾಣಕ್ಕೆ ಕೂಡಲೇ ಚಾಲನೆ ನೀಡಿ: ಎ.ಎಸ್.ಪೊನ್ನಣ್ಣ

A.S. Ponnanna

ಮಡಿಕೇರಿ:-  ಕೊಯನಾಡು ಬಳಿ ಈಗಾಗಲೇ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾಗಿರುವ ಜಾಗದಲ್ಲಿ ಭೂಮಿಪೂಜೆ ನೆರವೇರಿಸಲು ದಿನಾಂಕ ನಿಗಧಿ ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಮಾರ್ಚ್ ಅಂತ್ಯದ ವರೆಗಿನ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯ ಆರಂಭದಲ್ಲಿ ವಿರಾಜಪೇಟೆ ವಿಧಾನಸಭಾ […]

ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಸುವರ್ಣವಾಕಾಶ: ವಿಶೇಷ ಶಿಬಿರ

sports

ಕ್ರೀಡೆಯಲ್ಲಿ (sports) ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಕ್ರೀಡಾ ವಸತಿ ಮತ್ತು ನಿಲಯಗಳಲ್ಲಿ ಪ್ರವೇಶಾವಕಾಶ ನೀಡುವ ಸಲುವಾಗಿ ಆಯ್ಕೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಾದ್ಯಂತ ಒಟ್ಟು 2 ಕ್ರೀಡಾ ವಸತಿ ಶಾಲೆ ಹಾಗೂ 32 ಕ್ರೀಡಾ ವಸತಿ ನಿಲಯಗಳನ್ನು ಹೊಂದಿದೆ. ಈ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 5ನೇತರಗತಿ, 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಹಂತದ ಕ್ರೀಡಾಪಟುಗಳಿಗೆ ಪ್ರವೇಶಾವಕಾಶ ನೀಡಲಾಗುತ್ತಿದ್ದು ಕ್ರೀಡಾಪಟುಗಳಿಗೆ ಉಚಿತ ಊಟೋಪಹಾರ, ವಸತಿ, ವೈಜ್ಞಾನಿಕ ಕ್ರೀಡಾ ತರಬೇತಿ, ಕ್ರೀಡಾ ಸಲಕರಣೆಗಳು, […]

ಪಿ.ಎಂ.ಶ್ರೀ ಸರ್ಕಾರಿ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

goverment school

ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮವು ನಡೆಯಿತು. ಶಾಲಾ (School) ಹಿರಿಯ ಮುಖ್ಯ ಶಿಕ್ಷಕಿ ಹೆಚ್.ಕೆ.ಸುಶೀಲ ಅವರು ಮಾತನಾಡಿ ಶಾಲೆಯಲ್ಲಿ ಸಿಗುವ ಉಚಿತ ಸೌಲಭ್ಯ ಹಾಗೂ ಸರ್ಕಾರದ ವತಿಯಿಂದ ದೊರೆಯುವ ಉಚಿತ ಸೌಲಭ್ಯಗಳ ಬಗ್ಗೆ ವಿವರಿಸಿದರು. ಶಾಲೆಯಲ್ಲಿನ ಸೌಲಭ್ಯಗಳು ನುರಿತ ಶಿಕ್ಷಕರು, ಸುಸಜ್ಜಿತ ನವೀನ ಕಟ್ಟಡ, ಸುಸಜ್ಜಿತ ಪೀಠೋಪಕರಣಗಳು, ಅನುಭವಾತ್ಮಕ ಕಲಿಕೆ, ವಿಶಾಲವಾದ ಆಟದ ಮೈದಾನ, ಗ್ರಂಥಾಲಯ, ಉತ್ತಮ ವಿಜ್ಞಾನ, ಗಣಿತ, ಸಮಾಜ ಸಮಾಜ ವಿಜ್ಞಾನ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, […]