ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ – ಮಹಿಳೆಯರ ʼಋತುಚಕ್ರ ರಜೆʼಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ವಿವಿಧ ಕ್ಷೇತ್ರದಲ್ಲಿ ಉದ್ಯೋಗದಲ್ಲಿ ತೊಡಗಿರುವ ಮಹಿಳೆಯರಿಗೆ ಇನ್ನು ಮುಂದೆ ತಿಂಗಳಿಗೆ ಒಂದು ದಿನ ಋತುಚಕ್ರದ ರಜೆ ನೀಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಮ್ಮತಿಸಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್ MNC ಗಳು IT ಮತ್ತು ಇತರೆ ಖಾಸಗಿ ಕೈಗಾರಿಕೆ ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ […]
ರಾಜ್ಯ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟ: ಕೊಡಗು ತಂಡ ಚಾಂಪಿಯನ್… ರಾಷ್ಟ್ರಮಟ್ಟಕ್ಕೆ ಆಯ್ಕೆ

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ (Government) ನೌಕರರ ಸಂಘದ ಆಶ್ರಯದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಕೊಡಗು (Kodagu) ತಂಡ ಚಾಂಪಿಯನ್ ಆಗಿದೆ. ಫೈನಲ್ ಪಂದ್ಯದಲ್ಲಿ ಮೈಸೂರು ತಂಡದ ವಿರುದ್ದ 4-1 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದೆ. ಆ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ (State Government) ನೌಕರರ ಕ್ರೀಡಾಕೂಟ (Sports) ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಜ್ಯೋತಿ ಬೆಳಗಿ ಚಾಲನೆ ನೀಡಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ […]