ಲೆದರ್‌ಬಾಲ್ ಕ್ರಿಕೆಟ್: ಜಿಲ್ಲಾ ತಂಡಕ್ಕೆ ಪ್ರಗತಿ ಶಾಲೆಯ ವಿದ್ಯಾರ್ಥಿನಿಯರು ಆಯ್ಕೆ

ವಿರಾಜಪೇಟೆ :  ವಿರಾಜಪೇಟೆಯ ಪ್ರಗತಿ ನರ್ಸರಿ, ಪ್ರೈಮರಿ ಮತ್ತು ಹೈ ಸ್ಕೂಲ್ ಹಾಗೂ ಪ್ರಗತಿ ಕ್ರಿಕೆಟ್ ಅಕಾಡೆಮಿಯ ವಿದ್ಯಾರ್ಥಿನಿಯರು ಕೊಡಗು ಜಿಲ್ಲಾ ಲೆದರ್‌ಬಾಲ್ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದು, ಶಾಲೆಗೆ  ಕೀರ್ತಿ ತಂದಿದ್ದಾರೆ. ಅಂಡರ್-15 ವಿಭಾಗದಲ್ಲಿ ವಿನ್ಯಾ ಎನ್. ಎಸ್. ಪ್ರತೀಕ್ಷಾ ಕೆ ಎನ್ ,  ವರ್ಷಿಣಿ ಕೆ ಎಚ್ ಹಾಗೂ ಅಂಡರ್-19 ವಿಭಾಗದಲ್ಲಿ ಸಾನ್ವಿ ಎಸ್ ಭಟ್, ಧನ್ವಿ ಬಿ. ಆರ್.ಇವರು ಕೊಡಗು ಜಿಲ್ಲಾ ಲೆದರ್‌ಬಾಲ್ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿ ಉಡುಪಿಯಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ. ಈ ಪಂದ್ಯಗಳಲ್ಲಿ ಉಡುಪಿ, ದಕ್ಷಿಣ […]

NSS ಶಿಬಿರ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

NSS Camp

ವಿರಾಜಪೇಟೆ: ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ಜರುಗುತಿದ್ದು ಅದರ ಪ್ರಯುಕ್ತ ಕಲ್ತೋಡು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ವಿರಾಜಪೇಟೆಯ ದಂತ ವೈದ್ಯಕೀಯ ಮಹಾ ವಿದ್ಯಾಲಯದ ಸಹಯೋಗದಲ್ಲಿ ಉಚಿತ ದಂತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಚಿಕಿತ್ಸೆ, ವಿರಾಜಪೇಟೆಯ ಡಾ. ಅಗರವಾಲ್ಸ್ ಕ್ಲಿನಿಕ್ ನ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ […]

ಮೆಟ್ರಿಕ್‌ ಪೂರ್ವ ಬಾಲಕಿಯರ ನಿಲಯದಲ್ಲಿ ಹದಿಹರೆಯದ ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಾಗಾರ

ಮಡಿಕೇರಿ : ಪಾಲಿಬೆಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಪೋಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕಾನೂನು ಅರಿವು ಮತ್ತು ಹದಿಹರೆಯದ ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಯಿತು. ಪೊಲೀಸ್‌ ಉಪನಿರೀಕ್ಷಕ ಹೆಚ್.ಕೆ. ಮಂಜುನಾಥ್ ಅವರು ಪೋಕ್ಸೊ ಕಾಯ್ದೆ,112 ತುರ್ತು ಸಂಖ್ಯೆ, ಮಕ್ಕಳ ಸಹಾಯವಾಣಿ, ಮಾದಕ ಪದಾರ್ಥಗಳ ದುಷ್ಪರಿಣಾಮ, ಮೊಬೈಲ್ ಬಳಕೆ, ಸೈಬರ್ ಅಪರಾಧ, ಬಾಲ ಅಪರಾಧ, ಗುಡ್ ಟಚ್-ಬ್ಯಾಡ್ ಟಚ್ ಇವುಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಕ್ಕಳ ಆರೋಗ್ಯದ […]

ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದಿಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಕೊಡೆ ವಿತರಣೆ

Sri Muthappan Malayali Samaj

ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ 17ನೇ ವರ್ಷದ ಸ್ಥಾಪನ ದಿನ ಅಂಗವಾಗಿ ವಿರಾಜಪೇಟೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಕೆದಮುಳ್ಳೂರಿನ ಕಥರಿನ ಚಿತ್ತದಿನಿ ಮಕ್ಕಳ ಮನೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಮತ್ತು ಛತ್ರಿಯನ್ನು ವಿತರಿಸಲಾಗಿದೆ. ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ಅಧ್ಯಕ್ಷರಾದ ಸುಮೇಶ್ ರವರ ನೇತ್ರತ್ವದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗಿದೆ.

ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ: ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿಗಳ ಸಾಧನೆ

students

ಮಡಿಕೇರಿ : ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ವತಿಯಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಪದವಿ ಪ್ರದಾನ ಮಾಡಲಾಯಿತು. ಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರೈನೋಬ್ರೈನ್ ಕೇಂದ್ರದ 21ನೇ ಬ್ಯಾಚ್ ನ ಒಟ್ಟು 22 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಎರಡೂವರೆ ವರ್ಷ ೧೦ ಹಂತಗಳಿರುವ ಅಬಾಕಸ್ ಕೋರ್ಸ್ನ್ನು ಈ ವಿದ್ಯಾರ್ಥಿಗಳು (students) ಯಶಸ್ವಿಯಾಗಿ ಪೂರೈಸಿದ್ದಾರೆ. ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸಂಸ್ಥೆಯ ಕರ್ನಾಟಕ ಬ್ರೈನೋಬ್ರೈನ್ ಕಿಡ್ಸ್ ಅಕಾಡೆಮಿಯ ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಾಲ್ ಸ್ವರ್ಣಕರ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ […]

ಸಿಇಟಿ ಪರೀಕ್ಷೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

CET Exam

ಇದೇ ಏಪ್ರಿಲ್, 16 ಮತ್ತು 17 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಿಇಟಿ (CET) ಪರೀಕ್ಷೆ ಸಿದ್ಧತೆ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಇರಬೇಕು. ಪರೀಕ್ಷಾ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ, ಸ್ವಚ್ಛತೆ, ಶೌಚಾಲಯ ಇರಬೇಕು. ಸಿಇಟಿ ಪರೀಕ್ಷೆ ಸಂಬಂಧ ಸರ್ಕಾರದ […]

ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ

Students

2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು (Students) ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ’ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ, 31 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮ ವಿವರ, ಸೌಲಭ್ಯ ಪಡೆಯಲು ಇರಬೇಕಾದ […]

SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ಖಾಸಗಿ ಬಸ್ ಸೇವೆ

Private bus

ವಿದ್ಯಾರ್ಥಿಗಳು ಎಸ್.ಎಸ್. ಎಲ್. ಸಿ. ಪರೀಕ್ಷೆ (SSLC Exam) ಮುಗಿಸಿ ಮನೆಗೆ ಹಿಂತಿರುಗಲು ಅನುಕೂಲವಾಗುವ ಸದುದ್ದೇಶದಿಂದ ಖಾಸಗಿ ಬಸ್ ಮಾಲೀಕರೊಬ್ಬರು ತನ್ನ ಒಡೆತನದ ಬಸ್ ಅನ್ನು ಒದಗಿಸುವ ಮೂಲಕ ಪೋಷಕರ ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜಯಲಕ್ಷ್ಮಿ ಬಸ್ ಮಾಲಿಕರಾದ ಕಾಡೇಮಾಡ ಗೌತಮ್ ಅವರು ತಮ್ಮ ಖಾಸಗಿ ಬಸ್ ಅನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಿ ಜನಮೆಚ್ಚುಗೆಗೆ ಪಾತ್ರರಾದವರಾಗಿದ್ದಾರೆ. ಪೊನ್ನಂಪೇಟೆ ತಾಲೂಕು ತಿತಿಮತಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರವಿದ್ದು, ಇಲ್ಲಿ ಪರೀಕ್ಷೆ ಬರೆದ ನಂತರ ಬಾಳೆಲೆ, ಪೊನ್ನಪಸಂತೆ, […]

ಎಚ್ಚರಿಕೆ: ಉಚಿತ ಲ್ಯಾಪ್ಟಾಪ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ವಂಚನೆ!

free laptops

ಆತ್ಮೀಯ ಪೋಷಕರೇ, ಕೆಲವು ದಿನಗಳಿಂದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ತೇರ್ಗಡೆಗೊಂಡ ವಿದ್ಯಾರ್ಥಿಗಳ ಪೋಷಕರಿಗೆ 8867388278 (ಟ್ರೂ ಕಾಲರ್’ನಲ್ಲಿ ದೀಪ ಗೌಡ ಎಂಬ ಹೆಸರು ಬರುತ್ತಿದೆ) ಎಂಬ ಸಂಖ್ಯೆಯಿಂದ ಕರೆಗಳು ಬರುತ್ತಿದ್ದು, ತಮ್ಮ ಮಗ/ಮಗಳಿಗೆ ಎಸ್ ಎಸ್ ಎಲ್ ಸಿ/ ಪಿ ಯು ಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿರುವುದರಿಂದ ಸಾಂಸಂಗ್ ಕಂಪನಿಯ ವತಿಯಿಂದ ಸುಮಾರು ರೂ ಐವತ್ತು ಸಾವಿರ ಬೆಲೆ ಬಾಳುವ ಲ್ಯಾಪ್ಟಾಪ್ (laptop) ಉಚಿತವಾಗಿ ನೀಡುತ್ತಿದ್ದು, ವಿದ್ಯಾರ್ಥಿಗಳೊಂದಿಗೆ ಪೋಷಕರು […]

ಮಡಿಕೇರಿ ನಗರ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ

General Thimmaiah Public School students

ಮಡಿಕೇರಿ (Madikeri) ನಗರ ಠಾಣೆಯಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ (General Thimmaiah Public School) ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ನಡೆಸಿದ್ದು ಠಾಣೆಗೆ ಭೇಟಿ ನೀಡಿದ ವಿದ್ಯಾರ್ಥಿಗಳಿಗೆ ಠಾಣೆಯ ಬಗ್ಗೆ, ಪೊಲೀಸ್‌ ಸೇವೆಗಳ ಬಗ್ಗೆ, ಮಕ್ಕಳ ಕಾನೂನು, ರಸ್ತೆ ಸುರಕ್ಷತೆ, ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳು ಮುಂತಾದವ ವಿಷಯಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.