ಪೊನ್ನಂಪೇಟೆ : ಕೆರೆಗೆ ಹಾರಿ ಆತ್ಮಹ*ತ್ಯೆಗೆ ಶರಣಾದ ಮಹಿಳೆ..!

ಗೋಣಿಕೊಪ್ಪ : ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತೂಚಮಕೇರಿಯಲ್ಲಿ ನಡೆದಿದೆ. ಮೂಕಳಮಾಡ ಸುರೇಶ್ ಎಂಬವರ ಪತ್ನಿ ಸುಮಿತಾ(48) ಆತ್ಮಹ*ತ್ಯೆಗೆ ಶರಣಾದವರು. ಇಂದು(ಸೋಮವಾರ) ಬೆಳಗ್ಗೆ ಮನೆ ಬಳಿಯ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವು ದಿನಗಳಿಂದ ಸುಮಿತಾ ಅವರು ಮಾನಸಿಕವಾಗಿ ಬಹಳ ನೊಂದಿದ್ದರು ಎನ್ನಲಾಗಿದೆ. ಹೀಗಾಗಿ ಆತ್ಮಹ*ತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ – ನೊಂದು ಆತ್ಮಹ*ತ್ಯೆಗೆ ಶರಣಾದ ಯುವಕ..!

ಮಡಿಕೇರಿ : ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಆದ ವಿಚಾರ ತಿಳಿದು ಮನನೊಂದು ಯುವಕನೊಬ್ಬ ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಮರಗೋಡು ಜನತಾ ಕಾಲೋನಿ ನಿವಾಸಿ ಮನೋಜ್(26) ಮೃತ ಯುವಕ. ಮನೋಜ್ ಉಡುಪಿಯಲ್ಲಿ ಹೋಟೆಲ್ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಅಲ್ಲಿ ಯುವತಿಯೊಬ್ಬಳ ಪರಿಚಯವಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ನಡುವೆ ಆಕೆಗೆ ಇತ್ತೀಚೆಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥವಾಗಿದೆ. ಈ ವಿಚಾರ ತಿಳಿದ ಮನೋಜ್ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾನೆ. ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ […]
ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣ – ಮೂವರ ಬಂಧನಕ್ಕೆ ಆಗ್ರಹಿಸಿದ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ…

ಮಡಿಕೇರಿ : ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ಕಾಂಗ್ರೆಸ್ ಶಾಸಕ ಪೊನ್ನಣ್ಣ, ಮಂತರ್ ಗೌಡ, ಕಾಂಗ್ರೆಸ್ ಮುಖಂಡ ತೆನ್ನೀರ್ ಮೈನಾ ಕಾರಣ. ಈ ಮೂವರನ್ನ ಬಂಧಿಸಬೇಕು ಎಂದು ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹಿಸಿದ್ದಾರೆ. ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತವಿನಯ್ ಆತ್ಮಹತ್ಯೆಗೆ ಶರಣಾದ ವಿಚಾರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಕೆ.ಜಿ ಬೋಪಯ್ಯ, ಕೊಡಗು ಜಿಲ್ಲಾ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ವಿನಯ್ ವಿರುದ್ದ ರೌಡಿ ಶೀಟ್ ಓಪನ್ ಮಾಡಲು ತಯಾರಿ ನಡೆದಿತ್ತು. ವಿನಯ್ ಬಂಧನಕ್ಕೂ ಪೊಲೀಸರು […]