ಕ್ಲೋಸ್‌ಬರ್ನ್ : ವರ್ಗಾವಣೆಯಾದ ಶಿಕ್ಷಕಿ ಸುಜಾತ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಮಡಿಕೇರಿ : ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಯಾದ ಮುಖ್ಯಶಿಕ್ಷಕಿ ಡಿ.ಎಂ. ಸುಜಾತ ಅವರಿಗೆ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸುಜಾತ ಅವರ ಸೇವೆಯನ್ನು ಗೌರವಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯಲ್ಲಿ 11 ವರ್ಷ ಕಾಲ ಮುಖ್ಯಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ ಸುಜಾತ ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಜೊತೆಗೆ ಶಾಲೆಯ ಅಭಿವೃದ್ಧಿ ವಿಚಾರದಲ್ಲೂ ಯಾವುದೇ ರೀತಿಯಲ್ಲಿ ರಾಜೀಯಾಗದೆ ಶ್ರಮಿಸಿದರು ಎಂದು ಪೋಷಕರು ನೆನಪಿಸಿಕೊಂಡರು. ಗೌರವ ಸ್ವೀಕರಿಸಿ […]
ನಿವೃತ್ತ ಶಿಕ್ಷಕಿಗೆ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಗೌರವದ ಸನ್ಮಾನ

ಗೋಣಿಕೊಪ್ಪ : ಕಳತ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 26 ವರ್ಷ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಹಿರಿಯ ಶಿಕ್ಷಕಿ ಪೂದ್ರಿಮಾಡ ತಾರಾ ಪ್ರಕಾಶ್ ಅವರನ್ನು ಗ್ರಾಮಸ್ಥರು ಸನ್ಮಾನಿಸಿ ಅಭಿನಂದಿಸಿದರು. ಗೊಟ್ಟಡ ಕಳತ್ಮಾಡುವಿನ ಶ್ರೀ ಅಯ್ಯಪ್ಪ ಕ್ರೀಡಾ ಮತ್ತು ಸಾಂಸ್ಕೃತಿಕ ಸೇವಾ ಸಂಘದವ ವತಿಯಿಂದ 27ನೇ ವರ್ಷದ ಶ್ರೀ ಗೌರಿ ಗಣೇಶ ಉತ್ಸವ ನಡೆಯಿತು. ಈ ಕಾರ್ಯಕ್ರಮದಲ್ಲಿ ತಾರಾ ಪ್ರಕಾಶ್ ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು. ಗ್ರಾಮಸ್ಥರು, ವಿದ್ಯಾರ್ಥಿಗಳು, ತಾರಾ ಪ್ರಕಾಶ್ ಅವರ ಶಿಷ್ಯ ವೃಂದ ಈ […]
ಮಡಿಕೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ

ಸರ್ಕಾರಿ ಪ್ರಾಥಮಿಕ ಶಾಲೆಗಳ ಸೇವಾನಿರತ ಪದವೀದರ ಶಿಕ್ಷಕರಿಗೆ ಸಂಬಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಶಿಕ್ಷಕರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಪ್ರಾಥಮಿಕ ಶಾಲಾ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದಂತೆ ‘ವೃಂದ ಮತ್ತು ನೇಮಕಾತಿ’ ಆದೇಶದಿದ ತಿದ್ದುಪಡಿಯಿಂದ ಉಂಟಾಗಿರುವ ಸಮಸ್ಯೆಗಳನ್ನು […]
ಉದ್ಯೋಗಾವಕಾಶ: ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ:- ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ, ಮಡಿಕೇರಿ ತಾಲ್ಲೂಕು ಇಲ್ಲಿಗೆ 8ನೇ ತರಗತಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧಿಸಲು ಗೌರವಧನ ಆಧಾರದ ಮೇಲೆ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನಾಂಕವಾಗಿದ್ದು, ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಬಿಎಸ್ಸಿ, ಬಿಇಡಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ […]
ನೇಣು ಬಿಗಿದು ಶಿಕ್ಷಕಿ ಆತ್ಮಹ*ತ್ಯೆ – ಪತಿ ಕುಟುಂಬದ ವಿರುದ್ಧ ಕೊ*ಲೆ ಆರೋಪ..!

ನಾಪೋಕ್ಲು : ಶಿಕ್ಷಕಿಯೊಬ್ಬರು (Teacher) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಸಫ್ರೀನಾ(32)ಆತ್ಮಹ*ತ್ಯೆ ಮಾಡಿಕೊಂಡ ಶಿಕ್ಷಕಿ.ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ಮಧ್ಯರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಗಂಭೀರ ಸ್ವರೂಪದಲ್ಲಿದ್ದ ಅವರನ್ನು ತಕ್ಷಣ ನಾಪೋಕ್ಲು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ಈ ನಡುವೆ ಪತಿ ನಜೀರ್ ವಿರುದ್ಧ ಸಫ್ರೀನಾ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದು, ಕೊಲೆ ಮಾಡಿ ನೇಣು ಹಾಕಿದ್ದಾನೆಂದು ಗಂಭೀರ ಆರೋಪ ಮಾಡಿದ್ದಾರೆ. […]
ಕೂಡಲೇ ಅರ್ಜಿ ಸಲ್ಲಿಸಿ: ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ:-ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 08 ಅತಿಥಿ ಶಿಕ್ಷಕರ (Guest Teacher) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 10 ಕೊನೆಯ ದಿನವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ.10 ಸಾವಿರ ನಿಗಧಿಪಡಿಸಿದೆ. ಇಂಗ್ಲೀಷ್ ಐಚ್ಚಿಕ ವಿಷಯದಲ್ಲಿ ಪದವಿ ಮತ್ತು ಬಿ.ಎಡ್. ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು […]