ಕೋವಿ ಕೊಡವರ ಸಂಪ್ರದಾಯದ ಅವಿಭಾಜ್ಯ ಅಂಗ: ಅರುಣ್ ಮಾಚಯ್ಯ

ಪೊನ್ನಂಪೇಟೆ: ಪೂಜ್ಯನೀಯ ಸ್ಥಾನದಲ್ಲಿರುವ ಕೋವಿ ಕೊಡವರ ಪುರಾತನ ಸಂಪ್ರದಾಯದ ಅವಿಭಾಜ್ಯ ಅಂಗವಾಗಿದೆ. ಕೊಡವರ ಸಂಸ್ಕೃತಿ ಮತ್ತು ಪದ್ಧತಿ ಪರಂಪರೆಯಿಂದ ಕೋವಿಯನ್ನು ಹೊರತುಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಚೆಪ್ಪುಡಿರ ಎಸ್. ಅರುಣ್ ಮಾಚಯ್ಯ ಹೇಳಿದರು. ಮಾಯಾಮುಡಿಯ ರಿಮ್ ಫೈರ್ ಶೂಟರ್ಸ್ ಹಾಗೂ ಗೋಣಿಕೊಪ್ಪಲಿನ ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ಮಾಯಮುಡಿಯ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ತೆಂಗಿನಕಾಯಿಗೆ ಗುಂಡು ಹೊಡೆಯುವ ಮುಕ್ತ ಸ್ಪರ್ಧೆ ತೋಕ್ ನಮ್ಮೆ 2025 […]