ಇಂಜಲಗೆರೆಯ ಕಾಫಿ ತೋಟದಲ್ಲಿ ವ್ಯಾಘ್ರನ ಹೆಜ್ಜೆ ಗುರುತು ಪತ್ತೆ – ಆತಂಕದಲ್ಲಿ ಗ್ರಾಮಸ್ಥರು..!

ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಒಂದೆಡೆ ಕಾಡಾನೆ ಉಪಟಳ ನಿರಂತರವೆಂಬಂತಾಗಿದೆ. ಈ ನಡುವೆ ಅಲ್ಲಲ್ಲಿ ಹುಲಿಗಳ ದರ್ಶನವಾಗುತ್ತಿದ್ದು, ಅರಣ್ಯದಂಚಿನ ಜನರ ನಿದ್ದೆಗೆಡಿಸಿದೆ. ಇಂಜಲಗೆರೆ ಗ್ರಾಮದಲ್ಲಿ ಹುಲಿಯ ಹೆಜ್ಜೆಗುರುತು ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಗ್ರಾಮದ ಮಂಡೇಪಂಡ ಪ್ರವೀಣ್ ಬೋಪಯ್ಯ ಅವರ ಕಾಫಿ ತೋಟದಲ್ಲಿ ಮಂಗಳವಾರ ಹೆಜ್ಜೆಗುರುತು ಕಂಡಿದೆ. ಇದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೆಲವು ದಿನದ ಹಿಂದೆ ಸಿದ್ದಾಪುರ ಬಳಿಯ ಕರಡಿಗೋಡು ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿತ್ತು. ಬಾಣಂಗಾಲ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿಗೆ ಜಾನುವಾರು ಮೃತಪಟ್ಟಿದ್ದವು. […]
ತೆರಾಲು ಬಳಿ ಹುಲಿ ಸೆರೆಹಿಡಿಯುವ ಕಾರ್ಯಾಚರಣೆ: ಸ್ಥಳಕ್ಕೆ ಎ.ಎಸ್.ಪೊನ್ನಣ್ಣ ಭೇಟಿ

ಕೊಡಗು ಜಿಲ್ಲೆಯ ಬಿರುನಾಣಿ ಗ್ರಾ.ಪಂ.ವ್ಯಾಪ್ತಿಯ ತೆರಾಲು ಗ್ರಾಮ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗೊಳ್ಳಲಾಗಿರುವ ‘ಹುಲಿ (Tiger) ಹಿಡಿಯುವ ಕಾರ್ಯಾಚರಣೆ’ ಸ್ಥಳಕ್ಕೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಭೇಟಿ ನೀಡಿ ವೀಕ್ಷಿಸಿದರು. ಹುಲಿ ಸೆರೆಹಿಡಿಯುವ ಕಾರ್ಯಚರಣೆ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸ್ಥಳೀಯರ ಜೊತೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸುದೀರ್ಘ ಚರ್ಚಿಸಿದರು. ತೆರಾಲು, ಟಿ.ಶೆಟ್ಟಿಗೇರಿ, ಶ್ರೀಮಂಗಲ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಹುಲಿಯು ಆಗಾಗ ಕಾಣಿಸಿಕೊಳ್ಳುತ್ತಿದ್ದು, […]