ಅನಿತಾ ಭಾಸ್ಕರ್ ಅವರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”

Anita Bhaskar

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರನ್ನು 2023ನೇ ಸಾಲಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ”ಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಪ್ರಶಸ್ತಿಯನ್ನು (Award) ಸನ್ಮಾನ್ಯ ಮುಖ್ಯ ಮಂತ್ರಿಗಳು ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್ ನಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಅನಿತಾ ಭಾಸ್ಕರ್ ಅವರು ಪ್ರವಾಸೋದ್ಯಮ ಕೇಂದ್ರ ಕಚೇರಿಯಲ್ಲಿ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ “ಸ್ವದೇಶ್ ದರ್ಶನ, ಪ್ರಸಾದ್ ಹಾಗೂ “ಸ್ವದೇಶ್ ದರ್ಶನ 2.0 ಯೋಜನೆಗಳು ಕರ್ನಾಟಕಕ್ಕೆ ದೊರಕುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ […]

ಹೋಂ ಸ್ಟೇ ನೋಂದಣಿ ಮಾಡಿಕೊಳ್ಳಲು ಅವಕಾಶ – ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಡಳಿತ

ಮಡಿಕೇರಿ : ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು […]

ನೋಂದಣಿ ಆಗದಿರುವ ಹೋಂಸ್ಟೇ ಹೆಸರು ನೋಂದಾಯಿಸಿ: ವೆಂಕಟ್ ರಾಜಾ

Kodagu DC

ಜಿಲ್ಲೆಯ ಪ್ರವಾಸಿ ಸ್ಥಳ, ಹೋಂಸ್ಟೇ (Homestay) ಹಾಗೂ ಹೋಟೆಲ್‍ಗಳು ಸೇರಿದಂತೆ ಎಲ್ಲೆಡೆ ಪ್ರವಾಸಿಗರ ಸುರಕ್ಷತೆ ಮತ್ತು ರಕ್ಷಣೆಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇದುವರೆಗೆ ನೋಂದಣಿ ಆಗದಿರುವ ಹೋಂಸ್ಟೇಗಳು ಕಡ್ಡಾಯವಾಗಿ ನೋಂದಣಿ ಆಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆ ನಿರ್ವಹಿಸುವ ಕುರಿತು ಜಿಲ್ಲೆಯ ಹೋಟೆಲ್, ರೆಸಾರ್ಟ್, ಹೋಂ-ಸ್ಟೇ ಹಾಗೂ ಟ್ರಾವೆಲ್ಸ್ ಏಜೆನ್ಸಿ ಸಂಸ್ಥೆಯ ಪ್ರತಿನಿಧಿಗಳ ಜತೆ ಬುಧವಾರ ನಡೆದ […]