ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ – ನಂದಿಮೊಟ್ಟೆ ಜೀಪ್‌ ಚಾಲಕರ ವಿರುದ್ಧ ಪ್ರಕರಣ ದಾಖಲು..!

ಮಡಿಕೇರಿ : ನಗರದ ಹೊರವಲಯದ ನಂದಿಮೊಟ್ಟೆಯಲ್ಲಿ ಇತ್ತೀಚೆಗೆ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಂದಲಪಟ್ಟಿಗೆ ಬಾಡಿಗೆ ತೆರಳುವ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರವಾಸಿ ಕುಟುಂಬ ಹಾಗೂ ಸ್ಥಳೀಯ ಜೀಪ್‌ ಚಾಲಕರ ನಡುವೆ ಗಲಾಟೆ ನಡೆದು, ಈ ವೇಳೆ ಅಲ್ಲಿನ ಚಾಲಕರು ಕೆಲವರು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದರು. ಘಟನೆಯ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ಬಳಿಕ ಹಲ್ಲೆಗೊಳಗಾದ ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ದಾಖಲೆ ಸಹಿತವಾಗಿ ಪೊಲೀಸ್‌ ಠಾಣೆಯಲ್ಲಿ ದೂರು […]

ಕಣಿವೆಯಲ್ಲಿ ಅಪಾಯಮಟ್ಟದಲ್ಲಿ ಹರಿಯುತ್ತಿರುವ ಕಾವೇರಿ – ತೂಗು ಸೇತುವೆ ಮೇಲೆ ಪ್ರವಾಸಿಗರ ಪ್ರವೇಶ ನಿರ್ಬಂಧ..!

ಕುಶಾಲನಗರ : ಜಿಲ್ಲಾದ್ಯಂತ ಎಡೆಬಿಡದೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಕಣಿವೆ ಬಳಿ ಕಾವೇರಿ ಮೈದುಂಬಿ ಹರಿಯುತ್ತಿದ್ದು, ಅಪಾಯಮಟ್ಟ ತಲುಪಿದೆ. ಹೀಗಾಗಿ ತೂಗುಸೇತುವೆ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಈ ಪ್ರದೇಶವನ್ನು ಪರಿಶೀಲಿಸಿ ತಹಸೀಲ್ದಾರ್ ಕಿರಣ್ ಗೌರಯ್ಯ, ತೂಗು ಸೇತುವೆ ಪ್ರವೇಶ ದ್ವಾರವನ್ನು ಬಂದ್‌ ಮಾಡಿಸಿದ್ದಾರೆ. ಸೇತುವೆ ಮೇಲೆ ಸಾರ್ವಜನಿಕರು ಅಪಾಯವನ್ನೂ ಲೆಕ್ಕಿಸದೆ ಓಡಾಡುತ್ತಾ, ಸೆಲ್ಫಿ ತೆಗೆದುಕೊಳ್ಳುತ್ತಾ ಇದ್ದರು. ಈ ಬಗ್ಗೆ ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದನ್ನು ಗಂಭೀರವಾಗಿ ತೆಗೆದುಕೊಂಡ ಅಧಿಕಾರಿಗಳು, […]