ಶುಂಠಿಗೆ ಹೆಚ್ಚಿದ ರೋಗ: ಸರಿಯಾದ ನಿರ್ವಹಣೆ ಹೇಗೆ?

ಮಡಿಕೇರಿ:- ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಂಠಿ (Ginger) ಬೆಳೆಯಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿದ್ದು, ರೈತರು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದರೆ ಶೇ.60-70ರಷ್ಟು ಇಳುವರಿ ನಷ್ಠ ಅನುಭವಿಸಬೇಕಾಗುತ್ತದೆ ಎಂದು ಬೆಂಗಳೂರು ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ.ಹರೀಶ್ ಬಿ.ಎಸ್. ಅವರು ತಿಳಿಸಿದರು. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯ, ಮೈಸೂರು ಕೃಷಿ ತಂತ್ರಜ್ಞರ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮಹಾವಿದ್ಯಾಲಯದ ಆವರಣದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ರೈತರಿಗೆ “ಶುಂಠಿ […]
ಅರ್ಜಿ ಆಹ್ವಾನ: ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್

ಐಐಎಸ್‍ಸಿ, ಐಐಟಿ ಮತ್ತು ಎನ್‍ಐಟಿ ಸಂಸ್ಥೆಗಳ ಮೂಲಕ ಆರ್ಟಿಫೀಷಿಯಲ್ ಇಂಟಲಿಜೆನ್ಸ್ (Artificial Intelligence) ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್‍ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಎಂಜಿನಿಯರಿಂಗ್ ಪದವೀಧರರಿಗೆ ರೂ.15 ಸಾವಿರಗಳ ಶಿಷ್ಯವೇತನ/ ತರಬೇತಿ ನೀಡುವ ಸಂಬಂಧ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ಇಚ್ಚಿಸುವವರು ಏಪ್ರಿಲ್, 25 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ 9632465161. ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, […]