ಅರೆಕಾಡು ಅಂಗನವಾಡಿ ಕೇಂದ್ರದಲ್ಲಿ LKG-UKG ಪ್ರಾರಂಭೋತ್ಸವ

ಮರಗೋಡು : ಅರೆಕಾಡು ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭೋತ್ಸವ ಕಾರ್ಯಕ್ರಮ ನೆರವೇರಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಹಳ್ಳಿಗಳಲ್ಲಿ ಎಲ್‌ಕೆಜಿ ಇಲ್ಲದಿರುವುದರಿಂದ ಇಂಗ್ಲಿಷ್ ಕಲಿಕೆಗಾಗಿ ಪೋಷಕರು ತಮ್ಮ ಮಕ್ಕಳನ್ನು ದೂರದಲ್ಲಿರುವ ಶಾಲೆಗೆ ವಾಹನಗಳಲ್ಲಿ ಮಕ್ಕಳ ದೈಹಿಕ, ಮಾನಸಿಕ ಒತ್ತಡವನ್ನು ಲೆಕ್ಕಿಸದೆ ಕಳುಹಿಸುತ್ತಿದ್ದರು. ಆದರೆ ಇನ್ನು ಮುಂದೆ ಅಂಗನವಾಡಿ ಕೇಂದ್ರದಲ್ಲಿ LKG, UKG ಶಿಕ್ಷಣವನ್ನು ಪಡೆಯಬಹುದು. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಗ್ರಾಮ ಪಂಚಾಯಿತಿಯಿಂದ […]
ಕಡಗದಾಳು ಅಂಗನವಾಡಿಯಲ್ಲಿ LKG, UKG ಪ್ರಾರಂಭೋತ್ಸವ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ

ಮಡಿಕೇರಿ : ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಪ್ರಾರಂಭೋತ್ಸವ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕುರಿತಾಗಿ ಮಾತನಾಡಿದ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಐಸಿಡಿಎಸ್ ಸುವರ್ಣ ಮಹೋತ್ಸವದ ಅಂಗವಾಗಿ ಸರ್ಕಾರ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿಯನ್ನು ಪ್ರಾರಂಭಿಸುತ್ತಿದ್ದು, ಮಡಿಕೇರಿ ತಾಲೂಕಿನ 10 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಯುಕೆಜಿ ಪ್ರಾರಂಭವಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಕಳುಹಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕೆಂದರು. ಕಡಗದಾಳು ಗ್ರಾಮ ಪಂಚಾಯಿತಿಯಿಂದ 18 ಮಕ್ಕಳಿಗೆ ಸಮವಸ್ತ್ರ, […]