ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ – ರೌಡಿಶೀಟರ್ ಹಾಕುವ ಬೆದರಿಕೆವೊಡ್ಡಿದ್ದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು..!

ಮಡಿಕೇರಿ : ವಿನಯ್ ಸೋಮಯ್ಯ(vinay somaiah) ಮತ್ತು ವಿಷ್ಣು ನಾಚಪ್ಪ) ವಿರುದ್ಧ ರೌಡಿ ಶೀಟರ್ ಹಾಕುವುದಾಗಿ ಹೇಳಿದ್ದ ಪೊಲೀಸ್ ಸಿಬ್ಬಂದಿ ವಿರುದ್ದ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಯಿತು. ಮೃತ ವಿನಯ್ ಸೋಮಯ್ಯ ಸಹೋದರ ಜೀವನ್ ಮಾಜಿ ಸಂಸದ ಪ್ರತಾಪ್ ಸಿಂಹ(pratap simha), ಮಾಜಿ ಶಾಸಕ ಕೆ.ಜಿ ಬೋಪಯ್ಯ(kg bopaiah), ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಮುಖರಾದ ಭಾರತೀಶ್, ರಾಬಿನ್ ದೇವಯ್ಯ ಹಾಗೂ ಪ್ರಮುಖ ಮುಖಂಡರು ಈ ಸಂದರ್ಭ ಇದ್ದರು.
ಕೊಡಗಿನ ಶಾಸಕರ ವಿರುದ್ಧ FIR ದಾಖಲಿಸುವಂತೆ ವಿಜಯೇಂದ್ರ ಒತ್ತಾಯ: ಬೃಹತ್ ಪ್ರತಿಭಟನೆ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಕುಶಾಲನಗರದಲ್ಲಿ ವಿನಯ್ ಸೋಮಯ್ಯ(Vinay Somaiah) ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಮಾತನಾಡಿ, ಇಬ್ಬರು ಶಾಸಕರ ಕಿರುಕುಳದಿಂದಾಗಿ ವಿನಯ್ ಎಂಬ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಯಾರೆಂದು ಅವರು ತಮ್ಮ ಡೆತ್ ನೋಟ್‌ನಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ. ಆದರೆ, ಬೆಂಗಳೂರಿನಲ್ಲಿ ದಾಖಲಾದ FIR ನಲ್ಲಿ ಶಾಸಕರ ಹೆಸರುಗಳನ್ನು ಸೇರಿಸಿಲ್ಲ. ಇದು ಅಕ್ಷಮ್ಯ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರ ಮೇಲೆ ಒತ್ತಡಕ್ಕೆ ಇದೇ ಸ್ಪಷ್ಟ ಸಾಕ್ಷಿ, ವ್ಯಾಟ್ಸಾಪ್ ಗ್ರೂಪ್ […]
ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಮನೆಗೆ ಭೇಟಿ ನೀಡಿದ ಪ್ರತಾಪ್ ಸಿಂಹ, ಕುಟುಂಬಸ್ಥರಿಗೆ ಸಾಂತ್ವನ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (39) (Vinay Somaiah) ಆತ್ಮಹತ್ಯೆ ಅವರು ಆತ್ಮಹತ್ಯೆ ಮಾಡಿಕೊಂಡಿದೆ. ಈ ಘಟನೆ ರಾಜ್ಯ ರಾಜಕಾರಣದಲ್ಲಿ ತಿರುವು ಪಡೆದುಕೊಂಡು ಕಾಂಗ್ರೆಸ್ ವರ್ಸಸ್ ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ವಾಟ್ಸಪ್ ಪೋಸ್ಟ್ ಮಾಡಿ ಬಳಿಕ ಬೆಂಗಳೂರಿನ ನಾಗವಾರದ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಬಿಜೆಪಿ ಕಾರ್ಯಕರ್ತವಿನಯ್ ಸೋಮಯ್ಯ ಮನೆಗೆ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ […]
ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಕೊಡಗಿನ ಶಾಸಕರ ವಿರುದ್ಧ ದೂರು!

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (39) (Vinay Somaiah) ಆತ್ಮಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಶಾಸಕ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಅವರತ್ತ ಬಿಜೆಪಿ ನಾಯಕರು ಬೊಟ್ಟು ಮಾಡುತ್ತಿದ್ದಾರೆ ಮತ್ತು ತನಿಖೆಗೆ ಆಗ್ರಹಿಸಿದ್ದಾರೆ. ಆತ್ಮಹತ್ಯೆಗೆ ರಾಜಕೀಯ ಒತ್ತಡ ಮತ್ತು ಪೊಲೀಸ್ ಪ್ರಕರಣವೇ ಕಾರಣ ಎಂದು ಅವರು ಡೆತ್ ನೋಟ್‌ನಲ್ಲಿ ಆರೋಪಿಸಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದಂತೆ ಮೃತನ ಸಹೋದರ ಜೀವನ್ […]