ಮಾದರಿ ಆಚರಣೆ ಮೂಲಕ ಮೆಚ್ಚುಗೆ ಗಳಿಸಿದ ವಿನಾಯಕ ಸೇವಾ ಟ್ರಸ್ಟ್ ಗಣೇಶೋತ್ಸವ

ಮಡಿಕೇರಿ : ಕತ್ತಲೆಕಾಡು ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಜರುಗಿದ 19ನೇ ವರ್ಷದ ಗೌರಿ ಗಣೇಶೋತ್ಸವ ಹಲವು ವಿಶೇಷತೆಗಳ ಮೂಲಕ ಗಮನ ಸೆಳೆಯಿತು. ಸಾಂಪ್ರದಾಯಿಕ ಆಚರಣೆಗೆ ಒತ್ತು ನೀಡಿದ ಟ್ರಸ್ಟ್, ಮೂರು ದಿನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಆ.27ರಂದು ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಬಳಿಕ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಿದವು. ಜೋರು ಮಳೆಯ ನಡುವೆಯೂ ಗ್ರಾಮಸ್ಥರು ಉತ್ಸಾಹದಿಂದ ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಅದೇ ದಿನ ಸಂಜೆ ಸಂಗೀತ ರಜಮಂಜರಿ ಹಮ್ಮಿಕೊಳ್ಳಲಾಗಿತ್ತು. ಸೋಮವಾರಪೇಟೆಯ ವಿಶ್ವರೂಪ […]
ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಶ್ರೀರಾಮ ನವಮಿ ಆಚರಣೆ

ಮಡಿಕೇರಿ : ಕತ್ತಲೆಕಾಡು ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಶ್ರೀ ರಾಮನವಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಟ್ರಸ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ಸದಸ್ಯರು, ವಿದ್ಯಾರ್ಥಿಗಳು, ಗ್ರಾಮಸ್ಥರು ಭಾಗಿಯಾಗಿದ್ದರು. ಮಹಿಳೆಯರು ಆವರಣದಲ್ಲಿ ದೀಪ ಬೆಳಗಿದರು. ಬಳಿಕ ಶ್ರೀರಾಮನಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು. ಟ್ರಸ್ಟ್‌ನ ವಿದ್ಯಾರ್ಥಿ ಘಟಕದ ಸದಸ್ಯರು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ತಂಡದ ಸುರೇಶ್ ಮಾವಟ್ಕರ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ರಾಮನವಮಿಯನ್ನು ದೇಶದೆಲ್ಲೆಡೆ ಹಿಂದುಗಳು ಸಡಗರ, ಸಂಭ್ರಮದಿಂದ ಆಚರಿಸುತ್ತಾರೆ. ಮರ್ಯಾದ […]