KMSA ಲಾಂಛನ ಅನಾವರಣಗೊಳಿಸಿದ ಪೊನ್ನಣ್ಣ

ಪೊನ್ನಂಪೇಟೆ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ)ಯ ಅಧಿಕೃತ ಲಾಂಛನವನ್ನು ಗುರುವಾರದಂದು ಅನಾವರಣಗೊಳಿಸಲಾಯಿತು. ಸಂಸ್ಥೆಗಾಗಿ ವಿನ್ಯಾಸಗೊಳಿಸಲಾಗಿದ್ದ ನೂತನ ಲಾಂಛನವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಆಗಿರುವ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಬೆಂಗಳೂರಿನ ವಿಧಾನಸೌಧದ 2ನೇ ಮಹಡಿಯಲ್ಲಿರುವ ತಮ್ಮ ಕಚೇರಿಯಲ್ಲಿ ವಿದ್ಯುಕ್ತವಾಗಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೊನ್ನಣ್ಣ ಅವರು, ಕ್ರೀಡೆಗಳು ಜನರ ನಡುವೆ ಸೌಹಾರ್ದತೆಯನ್ನು ಬೆಳೆಸುತ್ತವೆ. ವಿವಿಧ ಹಿನ್ನೆಲೆಯ ಜನರು ಒಟ್ಟಾಗಿ ಆಡಲು ಮತ್ತು ಒಟ್ಟಿಗೆ ಕೆಲಸ ಮಾಡಲು ಅವಕಾಶ ನೀಡುತ್ತವೆ. ಮುಖ್ಯವಾಗಿ […]
ವೀರಾಜಪೇಟೆ ಗಣೇಶೋತ್ಸವ ಡಿಜೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ – ದೂರು ಹಿಂಪಡೆಯಲು ಮೊಹಮ್ಮದ್ ನಯಾಜ್ ಮನವಿ

ವೀರಾಜಪೇಟೆ : ವೀರಾಜಪೇಟೆ ಗಣೇಶೋತ್ಸವದಲ್ಲಿ ಧ್ವನಿವರ್ದಕ ಬಳಸಿದ ಸಂಬಂಧ ದಾಖಲಾಗಿರುವ ದೂರುಗಳನ್ನು ಹಿಂಪಡೆಯಬೇಕೆಂದು ಸ್ನೇಹಿತರ ಒಕ್ಕೂಟ ಮನವಿ ಮಾಡಿದೆ. ವರ್ಷಂಪ್ರತಿ ವೀರಾಜಪೇಟೆಯಲ್ಲಿ ನಡೆಯುವ ಐತಿಹಾಸಿಕ ಗೌರಿ ಗಣೇಶ ವಿಸರ್ಜನೋತ್ಸವ ಜಾತಿ ಮತ ಭೇದವಿಲ್ಲದೆ ಸರ್ವ ಜನಾಂಗದವರು ಕೂಡಿ ಒಗ್ಗೂಡಿ ಆಚರಿಸುತ್ತಾರೆ. ಈ ಸಂಭ್ರಮದ ಬಗ್ಗೆ ರಾಜ್ಯದ ಕೆಲವು ಮಾಧ್ಯಮಗಳು ಅಶಾಂತಿ ಉಂಟು ಮಾಡಲು ಪ್ರಯತ್ನಿಸುತ್ತಿದ್ದು ಅದಕ್ಕೆ ಯಾವುದೇ ಪೂರಕವಾದ ಸಾಕ್ಷಿ ಇರುವುದಿಲ್ಲ. ಉತ್ಸವದಲ್ಲಿ ಸರ್ವ ಜನಾಂಗದವರು ಕುಣಿದು ಕುಪ್ಪಳಿಸಿ ಊರ ಹಬ್ಬದಂತೆ ಸಂಭ್ರಮಿಸಿದ್ದಾರೆ. ಇದರಿಂದ ಯಾರಿಗೂ ಸಮಸ್ಯೆಯಾಗಿರುವುದಿಲ್ಲ. […]
Virajpet MLA Ponnanna: ಕೊಡಗು ವಿಶ್ವವಿದ್ಯಾಲಯದ ಕ್ಲೋಸ್‌ಗೆ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರ ನಿಲುವೇನು?

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯವನ್ನು (Kodagu University) ಮುಚ್ಚುವ ಕಾಂಗ್ರೆಸ್ ಸರ್ಕಾರದ ಪ್ರಸ್ತಾವನೆಯ ವಿರುದ್ಧ ಮಡಿಕೇರಿ ಶಾಸಕ ಮಂತರ್ ಗೌಡ ಅವರ ದಿಟ್ಟ ನಿಲುವನ್ನು ಶ್ಲಾಘಿಸಬೇಕಿದೆ. ಮೇಲ್ನೋಟಕ್ಕೆ, ಹಿಂದಿನ ಬಿಜೆಪಿ ಸರ್ಕಾರವು ಪ್ರಾರಂಭಿಸಿದ ವಿಶ್ವವಿದ್ಯಾಲಯಗಳನ್ನು ರಾಜಕೀಯ ಕಾರಣಗಳಿಗಾಗಿ ಮುಚ್ಚಲು ಸಿದ್ದರಾಮಯ್ಯ ಸರ್ಕಾರ ಬಯಸುತ್ತಿರುವಂತೆ ಕಾಣುತ್ತದೆ ಎಂದಿದ್ದಾರೆ. ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಎ.ಎಸ್.ಪೊನ್ನಣ್ಣ ಚಾಲನೆ ಪ್ರಸ್ತುತ ಕಾಂಗ್ರೆಸ್ ಆಡಳಿತವು ನೀಡಿರುವ ನೆಪವೆಂದರೆ ವಿಶ್ವವಿದ್ಯಾಲಯಗಳು ಅಸಮರ್ಪಕ ಮೂಲಸೌಕರ್ಯ ಮತ್ತು ಆರ್ಥಿಕ ಸಮಸ್ಯೆಗಳಿಂದಾಗಿ ಕಾರ್ಯಸಾಧ್ಯವಲ್ಲ ಅನ್ನೋದು. ಕಾಂಗ್ರೆಸ್ ಪಕ್ಷದವರೇ […]