Power Cut: ನಾಳೆ ಕೊಡಗಿನಲ್ಲಿ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ…!

ವಿರಾಜಪೇಟೆ (Virajpet) 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಅಮ್ಮತ್ತಿ ಹಾಗೂ ಎಫ್9 ಚಂಬೆಬೆಳ್ಳೂರು ಫೀಡರ್‍ನಲ್ಲಿ ಮೇ, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಪೂರ್ವ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ಅಮ್ಮತ್ತಿ, ಕಾರ್ಮಾಡು, ಬಿಳುಗುಂದ, ಕೊಂಡಂಗೇರಿ, ಹಾಲುಗುಂದ, ಕಣ್ಣಂಗಾಲ, ಒಂಟಿಯಂಗಡಿ, ಚೆಂಬೆಬೆಳ್ಳೂರು, ದೇವಣಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

ಮಡಿಕೇರಿ:- ವಿರಾಜಪೇಟೆ (Virajpet) ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿ ಹಾಗೂ ಜಿಂ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬೀ ಅವರ ನೇತೃತ್ವದಲ್ಲಿ ಜರುಗಿತು. ಮುಂದಿನ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮುಂಜಾಗ್ರತೆಯಾಗಿ ಸಾಂಕ್ರಮಿಕ ರೋಗಗಳನ್ನು ತಡೆಗಟ್ಟಲು ಸಿದ್ದರಾಗಿ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಲಜೀವನ್ ಮಿಷನ್ ಬ್ಯಾಚ್ 1, ಬ್ಯಾಚ್ 2 ಹಾಗೂ ಬ್ಯಾಚ್ 3 ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. […]
ಹಿರಿಯ ರಾಜಕಾರಣಿ ಬೊಟ್ಟೋಳಂಡ ಮಿಟ್ಟು ಚಂಗಪ್ಪ ಇನ್ನು ನೆನಪು ಮಾತ್ರ

ರಾಜಕಾರಣಿಯಾಗಿ, ಪ್ರವಾಸೋದ್ಯಮಿಯಾಗಿ, ಕೖಷಿಕರಾಗಿ, ಕಾಫಿ ಉದ್ಯಮಿಯಾಗಿ ಗಮನ ಸೆಳೆದಿದ್ದ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ (83) ಅವರು ಅಮ್ಮತ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಿಟ್ಟು ಚಂಗಪ್ಪ ಅವರು ಐದು ದಶಕಗಳ ಕಾಲ ರಾಜಕೀಯದಲ್ಲಿ ಕಾಂಗ್ರೆಸ್ ನ ನಿಷ್ಟಾವಂತ ನಾಯಕರೆನಿಸಿದ್ದರು. ನಾಳೆ ಬೆಳಗ್ಗೆ 10 ಗಂಟೆಯಿಂದ 1 ಗಂಟೆವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಬೊಟ್ಟೋಳಂಡ ಮಿಟ್ಟು ಚಂಗಪ್ಪ (Bottolanda Mitoo Chengappa) ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಸಾವ೯ಜನಿಕರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ […]
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಅಣಬೆ ಬೇಸಾಯದ ಕುರಿತು ಕಾರ್ಯಗಾರ

ವಿರಾಜಪೇಟೆ ಕಾವೇರಿ ಕಾಲೇಜು (Cauvery College) ಹಾಗೂ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ದಿನದ ಅಣಬೆ (Mushroom) ಬೇಸಾಯದ ಕುರಿತ ಪ್ರಯೋಗಾತ್ಮಕವಾದ ಕಾರ್ಯಗಾರವು (Workshop) ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಮಂಗಳವಾರ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಬಡತನದಲ್ಲಿ ಹುಟ್ಟೋದು ನಮ್ಮ ತಪ್ಪಲ್ಲ ಆದರೆ ಬಡವರಾಗಿ ಸಾಯುವುದು ನಮ್ಮ ತಪ್ಪು. ಪ್ರತಿಯೊಬ್ಬ ಮನುಷ್ಯ ಸಾಧಿಸುವ ಚಲವಿದ್ದರೆ ಹಲವಾರು ಅವಕಾಶಗಳಿವೆ . ಆರ್ಥಿಕ […]
ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮ

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಅರ್ಥಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮವು (program) ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ ಅವರು ಉದ್ಘಾಟಿಸಿದರು. ಕೊಡಗು ಜಿಲ್ಲಾ ಸಹಕಾರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ ರೇಣುಕಾ ಆರ್.ಎಸ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಹಕಾರಿ ಕ್ಷೇತ್ರದ ಮೂಲ ತತ್ವಗಳು, ಸಹಕಾರಿ ಸಂಘಗಳ ಕಾರ್ಯ ಚಟುವಟಿಕೆ, ವಿವಿಧ […]
Power Cut: ಕೊಡಗಿನ ಈ ಪ್ರದೇಶಗಳಲ್ಲಿ ಏ.05 ರಂದು ಕರೆಂಟ್ ಇರಲ್ಲ

ಏಪ್ರಿಲ್, 05 ರಂದು ಬೆಳಗ್ಗೆ 09 ರಿಂದ ಸಂಜೆ 5 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ ಸೇರಿದಂತೆ ಕಾಕೋಟುಪರಂಬು, ಕದನೂರು, ಕೆದಮುಳ್ಳೂರು, ಬೇಟೋಳಿ, ಆರ್ಜಿ, ಬಿ.ಶೆಟ್ಟಗೇರಿ, ಬಿಟ್ಟಂಗಾಲ, ಸಿದ್ದಾಪುರ, ಮಾಲ್ದಾರೆ, ಕರಡಿಗೋಡು, ಗುಹ್ಯ, ಅಮ್ಮತ್ತಿ, ಚೆಂಬೆಬೆಳ್ಳೂರು, ಮೂರ್ನಾಡು, ಮರಗೋಡು, ಹೊದ್ದೂರು, ಹಾಕತ್ತೂರು, ಹೊಸ್ಕೇರಿ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.
ವಿರಾಜಪೇಟೆಯಲ್ಲಿ NSS ವಿದ್ಯಾರ್ಥಿಗಳಿಂದ ಪರಿಸರ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ವಿರಾಜಪೇಟೆ: ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿ (ರಿ ), ಆರ್ಜಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆರ್ಜಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಜಾಥಾ ಅಭಿಯಾನ ಕಾರ್ಯಕ್ರಮ ನಡೆಯಿತು. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜು ಹಾಗೂ ಕಾವೇರಿ ಪದವಿ ಕಾಲೇಜಿನ ಎನ್. ಎಸ್. ಎಸ್ (NSS) ಘಟಕದ ವಿದ್ಯಾರ್ಥಿಗಳು ಸ್ವಚ್ಛತಾ ಜಾಥಾದಲ್ಲಿ ಭಾಗವಹಿಸಿದ್ದರು. ಈ ಅಭಿಯಾನವನ್ನು ಆರ್ಜಿ ಗ್ರಾಮ ಪಂಚಾಯತ್ ನಲ್ಲಿ ಉದ್ಘಾಟಿಸಿ ಮಾತನಾಡಿದ ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಮಾಚಯ್ಯ ರವರು […]
ರಾಜ್ಯಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಇತಿಹಾಸ ನಿರ್ಮಿಸಿದ ಕಾವೇರಿ ಕಾಲೇಜು

ಮೈಸೂರು ಸೇಂಟ್ ಜೋಸೆಫ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ವಿರಾಜಪೇಟೆಯ ಕಾವೇರಿ ಪದವಿ ಹಾಗೂ ಪದವಿ ಪೂರ್ವ ಪೈನಲ್ ಪಂದ್ಯ ಆಡುದರ ಮೂಲಕ ಒಂದೇ ವಿದ್ಯಾಸಂಸ್ಥೆಯ ಎ ಹಾಗೂ ಬಿ ತಂಡಗಳು ಪೈನಲ್ ಹಣಾಹಣಿಯಲ್ಲಿ ಆಡಿದ ಇತಿಹಾಸ ಸೃಷ್ಟಿ ಮಾಡಿದೆ. ಒಟ್ಟು 16 ತಂಡಗಳು ಭಾಗವಹಿಸಿದ್ದ ರಾಜ್ಯ ಮಟ್ಟದ 5ಎ ಸೈಡ್ ಹಾಕಿ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಪದವಿ ಕಾಲೇಜು (Cauvery College) 4 -1 ಗೋಲುಗಳ ಅಂತರದಲ್ಲಿ ವಿರಾಜಪೇಟೆ […]
ಕಾವೇರಿ ಕಾಲೇಜಿನಲ್ಲಿ ನಡೆದ ಹಾಕಿ ತೀರ್ಪುಗಾರರ ಕಾರ್ಯಾಗಾರ ಸಮಾರೋಪ

ವಿರಾಜಪೇಟೆ ಕಾವೇರಿ ಕಾಲೇಜು, ಕೊಡವ ಹಾಕಿ ಅಕಾಡೆಮಿ ಹಾಗೂ ಹಾಕಿ ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ ಕಾವೇರಿ ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಗುರುವಿರ ನಡೆದ ಹಾಕಿ ತೀರ್ಪುಗಾರರ ಕಾರ್ಯಗಾರದ (Hockey Referee Workshop) ಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೋಮವಾರಪೇಟೆ ತಾಲೂಕು ಕೊಡವ ಹಾಕಿ ((Hockey) ಮಿಯ ಕಾರ್ಯನಿರತ ಉಪಾಧ್ಯಕ್ಷರಾದ ಕುಕ್ಕೆರ ಜಯ ಚಿನ್ನಪ್ಪ ಮಾತನಾಡಿ, ನಮ್ಮ ಕಾಲದ ಹಾಕಿ ಆಟಕ್ಕೂ ,ಈ ಕಾಲದ ಹಾಕಿಯ ಆಟಕ್ಕೂ ಬಹಳ ಬದಲಾವಣೆಯಾಗಿದೆ. ಈ ರೀತಿಯ ಕಾರ್ಯಗಾರಗಳು ನಡೆದಂತಹ ಸಂದರ್ಭದಲ್ಲಿ […]
ವಿನೂತನ ಕಾರ್ಯಕ್ರಮ: ನಮ್ಮ ನಡಿಗೆ ಸಮುದಾಯದ ಕಡೆಗೆ

ವಿರಾಜಪೇಟೆಯ (Virajpet) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಎಸ್.ಸಿ, ಎಸ್.ಟಿ ಸಮಿತಿಯ ವತಿಯಿಂದ ನಮ್ಮ ನಡಿಗೆ ಸಮುದಾಯದ ಕಡೆಗೆ ಶೀರ್ಷಿಸಿಕೆಯಡಿಯಲ್ಲಿ ತಿತಿಮತಿ ಗ್ರಾಮ ಪಂಚಾಯಿತಿಯ ಮರಪಾಲ ಹಾಡಿಯಲ್ಲಿ ಹಾಡಿ ಜನರಿಗಾಗಿ ವಿಶೇಷ ಉಪನ್ಯಾಸ, ಹಾಡಿ ಬೇಟಿ ಮತ್ತು ಜಾಗೃತಿ ಅರಿವು ಕಾರ್ಯಕ್ರಮವು (program) ಸೋಮವಾರ ಮರಪಾಲ ಅಂಗನವಾಡಿಯಲ್ಲಿ ನಡೆಯಿತು. ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಾದ ರಾಮು.ಪಿ.ಸಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಭಿತ್ತಿಪತ್ರವನ್ನು ಬಿಡುಗಡೆ ಮಾಡಿ ಇಂದಿನ […]