ಜಲಜೀವನ್ ಮಿಷನ್ ಯೋಜನೆ ಜೂನ್ ಅಂತ್ಯದೊಳಗೆ ಪ್ರಗತಿ ಸಾಧಿಸಿ: ಯದುವೀರ್

Jaljeevan Mission

ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗೆ ಸಂಸದರಾದ ಯದುವೀರ್ (Yaduveer) ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಾಕೀತು ಮಾಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಇದರ ಗಂಭೀರತೆ ಅರ್ಥ ಮಾಡಿಕೊಂಡು ಬಾಕಿ ಇರುವ ಕಾಮಗಾರಿಯನ್ನು […]