ಸಾಮಾಜಿಕ ಜಾಲತಾಣದಲ್ಲಿ ಸಚಿವ ಸಂತೋಷ್ ಲಾಡ್‌ಗೆ ನಿಂದನೆ – ಯುವ ಕಾಂಗ್ರೆಸ್‌ನಿಂದ ಎಸ್ಪಿಗೆ ದೂರು

ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಅವಾಚ್ಯ ಶಬ್ದಗಳಿಂದ ವ್ಯಕ್ತಿಯೊಬ್ಬರು ನಿಂದಿಸಿದ್ದಾರೆಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಎಸ್ಪಿ ಕೆ. ರಾಮರಾಜನ್ ಅವರಿಗೆ ದೂರು ನೀಡಲಾಯಿತು. ಇತ್ತೀಚೆಗೆ ಸಂತೋಷ್ ಲಾಡ್ ಕೊಡಗು ಜಿಲ್ಲೆಗೆ ಸಂತೋಷ್ ಲಾಡ್ ಭೇಟಿ ನೀಡಿದ ಸಂದರ್ಭದ ಫೋಟೋವನ್ನು ಶಾಸಕ ಎ.ಎಸ್. ಪೊನ್ನಣ್ಣ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದಕ್ಕೆ ವ್ಯಕ್ತಿಯೊಬ್ಬರು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್, ಯುವ ಕಾಂಗ್ರೆಸ್ ನೇತೃತ್ವದಲ್ಲಿ ಎಸ್ಪಿ ಕೆ. ರಾಮರಾಜನ್ ಅವರಿಗೆ […]
ಕಾರ್ಯಕರ್ತರ ಕಡೆಗಣನೆ ಯುವ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಅನೂಪ್ ಕುಮಾರ್ ರಾಜೀನಾಮೆ

ಕೊಡಗು ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರನ್ನು ನಿರಂತರವಾಗಿ ಕಡೆಗಣಿಸುತ್ತಾ, ಪಕ್ಷದ ಯಾವುದೇ ಕಾರ್ಯಕ್ರಮಗಳನ್ನು ಯುವ ಕಾಂಗ್ರೆಸ್ ಮುಖಂಡರು ಮತ್ತು ಪದಾಧಿಕಾರಿಗಳಿಗೆ ತಿಳಿಸುತ್ತಿಲ್ಲ. ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಕೇವಲ ರಾಜಕೀಯವಾಗಿ ಮಾತ್ರ ಬಳಸುತ್ತಿದ್ದಾರೆ. ಕೊಡಗಿನಲ್ಲಿ ಕೆಲವೊಂದು ಹಿರಿಯ ಕಾಂಗ್ರೆಸ್ ಮುಖಂಡರು ಯುವ ಕಾಂಗ್ರೆಸ್ ಮುಖಂಡರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಕುಮಾರ್ (Anup Kumar) […]