ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ: ತಕ್ಷಣವೇ ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಲು ಸೂಚನೆ

ಹೆದ್ದಾರಿ 275ರ ಆನೆಕಾಡು ಬಳಿ ಇತ್ತೀಚೆಗೆ ಸಂಭವಿಸಿದ ಸರಣಿ ರಸ್ತೆ ಅಪಘಾತಗಳ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಮಂಗಳವಾರ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನೆಕಾಡು ಹೆದ್ದಾರಿ ವ್ಯಾಪ್ತಿಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಸಾವು-ನೋವುಗಳನ್ನು ತಡೆಯಲು ತುರ್ತು ಕ್ರಮ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸುವುದು ಹಾಗೂ ವೇಗ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಹೆದ್ದಾರಿ ವಿಭಾಗದ ಎಂಜಿನಿಯರ್‌ಗೆ ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು. ತುರ್ತು ರಸ್ತೆ ಸುರಕ್ಷತಾ […]
ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ನಾಗಾಲ್ಯಾಂಡ್ ಮೂಲದ ಇಬ್ಬರು ಯುವಕರು ಜಲಸಮಾಧಿ

ಕುಶಾಲನಗರದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಈಶಾನ್ಯ ಭಾರತ ಮೂಲದ ಇಬ್ಬರು ಯುವಕರು ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಕುಶಾಲನಗರ ಗಡಿಭಾಗದ ಕಾವೇರಿ ಸೇತುವೆ ಬಳಿ ನದಿಯಲ್ಲಿ ಮುಳುಗಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ. ನಾಗಾಲ್ಯಾಂಡ್ ರಾಜ್ಯದ ಬಸೊಸೊ ಕುಚಂಗ್ (23) ಹಾಗೂ ಯಾಂಕಂಗ್ (27) ಮೃತ ದುರ್ದೈವಿಗಳಾಗಿದ್ದಾರೆ. ಸಂಜೆ ವೇಳೆ ಘಟನೆ ನಡೆದಿದ್ದು ಕತ್ತಲು ಕವಿದಿದ್ದ ಹಿನ್ನೆಲೆಯಲ್ಲಿ ಮೃತದೇಹಗಳ ಪತ್ತೆ ಕಾರ್ಯಕ್ಕೆ ತೊಡಕಾಗಿದ್ದು, ಗುರುವಾರವೂ ಕಾರ್ಯಾಚರಣೆ ಮುಂದುವರಿಯಲಿದೆ. ಈ ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ […]