ನಾಪೋಕ್ಲು : ಶಿಕ್ಷಕಿಯೊಬ್ಬರು (Teacher) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಸಫ್ರೀನಾ(32)ಆತ್ಮಹ*ತ್ಯೆ ಮಾಡಿಕೊಂಡ ಶಿಕ್ಷಕಿ.ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ಮಧ್ಯರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಗಂಭೀರ ಸ್ವರೂಪದಲ್ಲಿದ್ದ ಅವರನ್ನು ತಕ್ಷಣ ನಾಪೋಕ್ಲು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ಈ ನಡುವೆ ಪತಿ ನಜೀರ್ ವಿರುದ್ಧ ಸಫ್ರೀನಾ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದು, ಕೊಲೆ ಮಾಡಿ ನೇಣು ಹಾಕಿದ್ದಾನೆಂದು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
