ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ 544ಕೋಟಿ ಫಲಾನುಭವಿಗಳಿಗೆ ರೂ.13,903ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಇದು ಹೊರತುಪಡಿಸಿ ಹಲವು ವಿಚಾರಗಳು ಚರ್ಚೆಯಾದವು.



