Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

Share this post :

ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನೂತನ ಬ್ರೇಕರ್‍ಗಳ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಡಿಸೆಂಬರ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅರುವತ್ತೋಕ್ಲು, ಕಿರುಗೂರು, ದೇವರಪುರ, ಮಾಯಮುಡಿ ಧನುಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಡಿಸೆಂಬರ್, 27 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

coorg buzz
coorg buzz