ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಜುಲೈ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ತೆಲುಗರ ಬೀದಿ, ಸುಂಕದ ಕಟ್ಟೆ, ಅಪ್ಪಯ್ಯಸ್ವಾಮಿ ರಸ್ತೆ, ಕುಕ್ಲೂರು, ಕಾಕೋಟುಪರಂಬು, ಬೇತ್ರಿ, ಕೆದಮುಳ್ಳೂರು, ಪಾಲಂಗಾಲ, ಕೊಟ್ಟೋಳಿ, ಬೋಯಿಕೇರಿ, ಕದನೂರು, ಮೈತಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
