ಮಡಿಕೇರಿ : ವಿರಾಜಪೇಟೆ ೬೬/೩೩/೧೧ ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-೩ ಪಂಜರ್‌ಪೇಟೆ ಫೀಡರ್‌ನಲ್ಲಿ ಅಕ್ಟೋಬರ್ ೩೦ ರಂದು ಬೆಳಗ್ಗೆ ೯ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ವಿದ್ಯಾನಗರ, ಕೆಎಸ್‌ಆರ್‌ಟಿಸಿ, ಶಾಂತಿನಗರ, ಗೋಣಿಕೊಪ್ಪ ರಸ್ತೆ, ನೆಹರುನಗರ, ಪಂಜರ್‌ಪೇಟೆ, ಸಿಲ್ವನಗರ, ವಿಜಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.



