ಈ ಬಾರಿ ೧೧ ದಿನ ನಾಡಹಬ್ಬ ದಸರಾ ಆಚರಣೆ – ವಿಜೃಂಭಣೆಯ ಉತ್ಸವಕ್ಕೆ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ..!

Share this post :

ಬೆಂಗಳೂರು : ಈ ಬಾರಿಯ ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಮುಂದಾಗಿದೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.
ಈ ಬಾರಿ ರಾಜ್ಯಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು ಎಂದರು. ಸೆಪ್ಟೆಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 11 ದಿನ ಕಾಲ ನಡೆಯಲಿದೆ.