ನವೆಂಬರ್, 11, 12 ಮತ್ತು 13 ರಂದು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲ್ಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.



