ನಾಪೋಕ್ಲು : ನಾಲ್ನಾಡ್ ಪ್ಲಾಂಟರ್ಸ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಬಿದ್ದಾಟಂಡ ಬುಟ್ಟಿ ಯಾಕ ತೆಂವಾದಲ್ಲಿ ಆಗಸ್ಟ್ 7 ಕ್ಕೆ ಸಾಂಪ್ರದಾಯಿಕ ಬೊಡಿ ನಮ್ಮೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸ್ಪರ್ಧೆಯಲ್ಲಿ 0.22 ರೈಫಲ್‌ನಲ್ಲಿ ತೆಂಗಿನ ಕಾಯಿಗೆ ಗುಂಡು ಹೊಡೆಯುವುದು(50 ಮೀಟರ್), 12 ಬೋರ್ ಕೋವಿಯಲ್ಲಿ ತೆಂಗಿನ ಕಾಯಿಗೆ ಗುಂಡು( 27 ಮೀಟರ್) ಹೊಡೆಯುವ ಸ್ಪರ್ಧೆ ಏರ್ಪಡಿಸಲಾಗಿದೆ.
ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಟ್ರೋಫಿ ಮತ್ತು ನಗದು ಬಹುಮಾನ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಗದ್ದೆಯಲ್ಲಿ ಹಗ್ಗ ಜಗ್ಗಾಟ ಮತ್ತು ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.



