ಕುಶಾಲನಗರದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಈಶಾನ್ಯ ಭಾರತ ಮೂಲದ ಇಬ್ಬರು ಯುವಕರು ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಕುಶಾಲನಗರ ಗಡಿಭಾಗದ ಕಾವೇರಿ ಸೇತುವೆ ಬಳಿ ನದಿಯಲ್ಲಿ ಮುಳುಗಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ. ನಾಗಾಲ್ಯಾಂಡ್ ರಾಜ್ಯದ ಬಸೊಸೊ ಕುಚಂಗ್ (23) ಹಾಗೂ ಯಾಂಕಂಗ್ (27) ಮೃತ ದುರ್ದೈವಿಗಳಾಗಿದ್ದಾರೆ. ಸಂಜೆ ವೇಳೆ ಘಟನೆ ನಡೆದಿದ್ದು ಕತ್ತಲು ಕವಿದಿದ್ದ ಹಿನ್ನೆಲೆಯಲ್ಲಿ ಮೃತದೇಹಗಳ ಪತ್ತೆ ಕಾರ್ಯಕ್ಕೆ ತೊಡಕಾಗಿದ್ದು, ಗುರುವಾರವೂ ಕಾರ್ಯಾಚರಣೆ ಮುಂದುವರಿಯಲಿದೆ. ಈ ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮತ್ತು ಮುಳುಗು ತಜ್ಞರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ.



