ವಿರಾಜಪೇಟೆ : 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಂಡಂಗಾಲದ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಬೇರಳಿನಾಡು ವತಿಯಿಂದ ಶುಕ್ರವಾರ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಂಡಂಗಾಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದ ನೇತೃತ್ವವನ್ನು ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೂಕಚಂಡ ಪ್ರಸನ್ನ ಸುಬ್ಬಯ್ಯ ವಹಿಸಿದ್ದರು. ಇದಕ್ಕೂ ಮೊದಲು ಶಾಲಾ ಆವರಣದಲ್ಲಿ ಧ್ವಜಾರೋಹಣ ನೆರವೇರಿತು. ಮೂಕಚಂಡ ಪ್ರಸನ್ನ ಸುಬ್ಬಯ್ಯ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಧ್ಯಾಹ್ನದವರೆಗೆ ಶಾಲಾ ಆವರಣವನ್ನು ಸಂಸ್ಥೆಯ ಸದಸ್ಯರು ಸ್ವಚ್ಛಗೊಳಿಸಿದರು.



