ವಾಲಿಬಾಲ್‌ ಪಂದ್ಯಾವಳಿ – ಬೇಟೋಳಿ ಸ.ಹಿ.ಪ್ರಾ. ಶಾಲೆ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Share this post :

ವೀರಾಜಪೇಟೆ : ಗುಂಡಿಕೆರೆ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ತಂಡ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದೆ. ಮಾಯಮುಡಿಯಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀಮಂಗಳ ಸಮೀಪದ ಕಾಕೂರಿನ ಜೆ. ಸಿ. ಶಾಲಾ ತಂಡವನ್ನು 21-15 ಮತ್ತು 21-12 ನೇರ ಸೆಟ್ಟುಗಳಿಂದ ಸೋಲಿಸಿ ವಿನ್ನರ್ಸ್ ಪ್ರಶಸ್ತಿಯನ್ನು ತನ್ನದಾಗಿಸುವ ಮೂಲಕ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ತಂಡ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿದೆ.
ಸೆಮಿ ಫೈನಲ್ ಪಂದ್ಯದಲ್ಲಿ ತಿತಿಮತಿಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ತಂಡವನ್ನು ಸೋಲಿಸಿದ ಈ ತಂಡ ಫೈನಲ್ ಪ್ರವೇಶಿಸಿತ್ತು. ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಎಂ. ಇಸ್ಮಾಯಿಲ್, ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ತಂಡ ಕಳೆದ ಹಲವು ವರ್ಷಗಳಿಂದ ಉತ್ತಮ ಸಾಧನೆ ಮಾಡುತ್ತಿದೆ. ಅದರಿಂದ ಈ ಬಾರಿ ಜಿಲ್ಲಾ ಮಟ್ಟದಲ್ಲೂ ವಿಜಯ ಸಾಧಿಸಲಿರುವ ಈ ತಂಡ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸುವ ಆಶಾಭಾವನೆ ಹೊಂದಲಾಗಿದೆ ಎಂದು ಹೇಳಿದ್ದಾರೆ.

coorg buzz
WhatsApp Image 2026-08-11 at 16.11.22