ಸೋಮವಾರಪೇಟೆ: ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ (Somwarpet) ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಮೂಲದ ಅಫೂಲ್ ಪುರದ ಸುಷ್ಮಾ(29) ಮೃತ ಮಹಿಳೆಯಾಗಿದ್ದಾರೆ. ಇಂದು ಬೆಳಿಗ್ಗೆ 5.30ಕ್ಕೆ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಮಣ್ಣಿನ ಗೋಡೆ ಕುಸಿದು ತಲೆ ಭಾಗಕ್ಕೆ ಬಿದ್ದ ಹಿನ್ನೆಲೆ ಸ್ಥಳದಲ್ಲೇ ಸಾವಪ್ಪಿದ್ದಾರೆ. ಮನೆಯೊಳಗಿದ್ದ ಈರ್ವರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
