ಮಡಿಕೇರಿ : ಸ್ಪೈಸಸ್ ಅಂಗಡಿಯಲ್ಲಿ ಪ್ರಧಾನ ಮಂತ್ರಿ ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿಯ ರಾಣಿಪೇಟೆ ನಿವಾಸಿ ಫಹಾದ್ ಎಮ್.ಇ(31), ತ್ಯಾಗರಾಜ ಕಾಲನಿಯ ನಿವಾಸಿ ಬಾಸಿಲ್ ಎಂ.ಎಚ್.(29), ತ್ಯಾಗರಾಜ ಕಾಲೋನಿ ನಿವಾಸಿ ಸಮೀರ್ ಎಂ.ಎಂ.(31) ಬಂಧಿತರು.
ಯುವಕರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಕೀಳುಮಟ್ಟದ ಭಾಷೆ ಬಳಕೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಅವರ ವಿರುದ್ಧ ಕ್ರಮಕ್ಕಾಗಿ ಪಕ್ಷಾತೀತವಾಗಿ ಆಗ್ರಹ ಕೇಳಿಬಂದಿತ್ತು. ಇದಾದ ಕೆಲವೇ ಗಂಟೆಯಲ್ಲಿ ಪೊಲೀಸರು ಅಲರ್ಟ್ ಆಗಿ ಕ್ರಮ ಕೈಗೊಂಡಿದ್ದು, ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.



